Mon. Apr 21st, 2025

ದರ್ಶನ್ ಬಂಧನ ಪ್ರಕರಣ:ಯಾವುದೇ ಒತ್ತಡಕ್ಕೆ ಮಣಿಯಲ್ಲ- ಪರಮೇಶ್ವರ್

Share this with Friends

ಬೆಂಗಳೂರು,ಜೂ.17: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಂಧಿತರಾಗಿರುವ
ನಟ ದರ್ಶನ್, ಪವಿತ್ರಾ ಗೌಡ ಸೇರಿ ಯಾರಿಗೂ ಸಾಫ್ಟ್ ಕಾರ್ನರ್ ತೋರಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕ್ರಮ ಕೈಗೊಳ್ಳುತ್ತಾರೆ ನಾವು ಯಾವುದೇ ಒತ್ತಡಗಳಿಗೂ ಮಣಿಯುವುದಿಲ್ಲ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ, ಯಾವುದೇ ವಿಷಯಗಳಿಗೆ ನಾವು ಮಣಿಯುವುದಿಲ್ಲ ಎಂದು ತಿಳಿಸಿದರು.

ಸೂಕ್ಷ್ಮ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ, ತನಿಖೆಯ ನಂತರ ತನಿಖಾ ವರದಿಯನ್ನು ಹೊರತರಲಾಗುವುದು ಎಂದು ಹೇಳಿದರು.

ತನಿಖೆ ಯಾವಾಗ ಮುಗಿಯುತ್ತದೆ ಎಂಬ ಪ್ರಶ್ನೆಗೆ, ಅದನ್ನು ತನಿಖಾ ತಂಡಕ್ಕೆ ಬಿಡಲಾಗಿದೆ. ಕಾನೂನು ಪ್ರಕಾರ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಪ್ರಾರಂಭಿಸಲಾಗುವುದು, ಯಾವುದೇ ಒತ್ತಡಕ್ಕೆ ಮಣಿಯದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ ಹೇಳಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.


Share this with Friends

Related Post