Thu. Dec 26th, 2024

ದರ್ಶನ್‌ ಪೊಲೀಸ್‌ ವಶಕ್ಕೆ, ಪವಿತ್ರಾ ಗೌಡ ಜೈಲಿಗೆ

Share this with Friends

ಬೆಂಗಳೂರು,ಜೂ.20: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ನಾಲ್ಕು ಆರೋಪಿಗಳನ್ನು ನ್ಯಾಯಾಲಯ ಮತ್ತೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್‌ ಮತ್ತು ಗ್ಯಾಂಗ್‌ ಅನ್ನು ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು.

ಹತ್ಯೆ ಪ್ರಕರಣದಲ್ಲಿ ಸ್ಥಳ ಮಹಜರು, ಸಾಕ್ಷ್ಯ ಸಂಗ್ರಹ ಪ್ರಕ್ರಿಯೆಗಳು ಎರಡು ವಾರಗಳಿಂದ ನಡೆದಿತ್ತು. ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್‌ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್‌ಪಿಪಿ ವಾದ ಮಂಡಿಸಿದರು.

ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಮತ್ತೆ ಶನಿವಾರದವರೆಗೆ ದರ್ಶನ್‌ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತು.

ನ್ಯಾಯಾಂಗ ಬಂಧನಕ್ಕೆ ಸೂಚಿಸಿರುವುದರಿಂದ ಇಂದೇ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.


Share this with Friends

Related Post