Fri. Apr 11th, 2025

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Share this with Friends

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿತು.

ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದರು. ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಅನಾರೋಗ್ಯದ ಕಾರಣಕ್ಕಾಗಿ ಜಾಮೀನು ಕೇಳುತ್ತಿದ್ದೇವೆ ಎಂದು ಹೇಳಿದರು.

ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿ ಕೇಳಿದ ನ್ಯಾಯಾಲಯ, ಆಕ್ಷೇಪ ಸಲ್ಲಿಕೆಗೆ ಎಸ್. ಪಿ. ಪಿ. ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿತು.


Share this with Friends

Related Post