ಮೈಸೂರು: ಮೈಸೂರಿನಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಕ್ರೋಶ ಗೊಂಡಿದ್ದಾರೆ.
ಜಿಲ್ಲಾಡಳಿತ ಇಂದು ಪುರಭವನದ ಆವರಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿ ನಿಬ್ಬಾಣ ದಿನದ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಈ ವೇಳೆ ಏಕಾಏಕಿ ನೂರಾರು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ದಾವಿಸಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ
ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು.
ನಂತರ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರು ಮತ್ತು ಪೊಲೀಸ್ ಅಧಿಕಾರಿಗಳು ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದರು.ಆಗ ಅವರೊಂದಿಗೆ ವಾಗ್ವಾದ ನಡೆಸಿದರು.
ಯಾರ ಸಮಾಧಾನಕ್ಕೂ ಜಗ್ಗದೆ ಪುರಭವನದ ಆವರಣದಲ್ಲೇ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕುಳಿತರು.ಶೀಘ್ರವಾಗಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳಬೇಕೆಂದು ಆಗ್ರಹಿಸಿದರು.