Thu. Mar 5th, 2026

ದೆಹಲಿ ಸ್ಪೋಟ: ಬೆಂಗಳೂರು ಸೇರಿ ರಾಜ್ಯದಲ್ಲಿ ಕಟ್ಟೆಚ್ಚರ

Share this with Friends

ಬೆಂಗಳೂರು: ದೆಹಲಿ ಕಾರು ಸ್ಪೋಟ ಘಟನೆ ಬೆನ್ನಲ್ಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಡಿಜಿ&ಐಜಿಪಿ ಆದೇಶದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.

ದೆಹಲಿ ಕೆಂಪುಕೋಟೆ ಸಮೀಪದ ಮೆಟ್ರೋ ನಿಲ್ದಾಣದ ಗೇಟ್ 1 ರ ಸಮೀಪ ಮಾರುತಿ ಇಕೋ ವ್ಯಾನು ಸ್ಪೋಟಗೊಂಡ ದುರಂತ ಘಟನೆ ಬೆನ್ನಲ್ಲೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದು, ಏರ್​ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ನಿಗಾವಹಿಸುವಂತೆ ಆಯಾ ಜಿಲ್ಲಾ ಎಸ್​ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸುವಂತೆ ನಗರ ಪೊಲೀಸ್ ಆಯುಕ್ತ ಸೀಮಂತ್​ ಕುಮಾರ್ ಸಿಂಗ್​​​​​ ಸೂಚಿಸಿದ್ದಾರೆ. ಲಾಡ್ಜ್‌ನಲ್ಲಿ ತಂಗಿರುವ ಹೊರ ರಾಜ್ಯದವರ ವಿಚಾರಣೆ ಮಾಡಬೇಕು. ರಾತ್ರಿ ವೇಳೆ ಗಸ್ತು ಹೆಚ್ಚಳ ಮಾಡುವಂತೆ ಡಿಸಿಪಿ, ಎಸಿಪಿ, ಇನ್ಸ್​ಪೆಕ್ಟರ್​ಗಳಿಗೆ ಸೂಚನೆ ನೀಡಿದ್ದು, ಹೆಚ್ಚಿನ ಅಲರ್ಟ್ ಗೆ ಸೂಚಿಸಲಾಗಿದೆ.


Share this with Friends

Related Post