ದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಕೊನೆಗೂ ನ್ಯಾಯಾಲಯದ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಇಡಿ 6 ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅರವಿಂದ್ ಕೇಜ್ರಿವಾಲ್ ಒಂದಕ್ಕೂ ಉತ್ತರಿಸಿರಲಿಲ್ಲ. ಹೀಗಾಗಿ ಕೋರ್ಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿತ್ತು.
ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ. ಈ ಕಾರಣಕ್ಕೆ ಕೋರ್ಟ್ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು. ಕೋರ್ಟ್ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ದೆಹಲಿಯಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು ಅದಕ್ಕಾಗಿ ಕೋರ್ಟ್ ವಿಚಾರಣೆಗೆ ಅವರು ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ದಾರೆ ಎಂದು ಕೇಜ್ರಿವಾಲ್ ಪರ ವಕೀಲರು ಹೇಳಿದ್ದಾರೆ. ಮುಂದಿನ ಕೋರ್ಟ್ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುದಾಗಿ ಹೇಳಿದ್ದಾರೆ. ಕೇಜ್ರಿವಾಲ್ ಅವರು ಈ ಮನವಿಯನ್ನು ಕೋರಿ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ನ್ಯಾಯಲಯವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ.
ಪೆಟ್ಟಿಗೆ ಅಂಗಡಿಯಲ್ಲಿ ಮಕ್ಕಳಿಗೆ ಚಾಕೊಲೇಟ್ ಖರೀದಿಸಿದ ಯಶ್ ಫೋಟೋ ವೈರಲ್