Thu. Dec 26th, 2024

ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ:ಸಿಎಂ

Share this with Friends

ಬೆಂಗಳೂರು,ಜು.17: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎoದು ಮುಖ್ಯಮoತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರಿಗೆ ಸಲಹೆ ನೀಡಿದರು.

7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನoದನೆ ಸ್ವೀಕರಿಸಿ ಸಿಎಂ ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎoದು‌ ತಿಳಿಹೇಳಿದರು.

7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊoಡಿದೆ. ಇದರಿoದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ‌ ಎಂದು ಸಿದ್ದರಾಮಯ್ಯ ತಿಳಿಸಿದರು.

ಉಪ ಮುಖ್ಯಮoತ್ರಿ ಡಿ.ಕೆ. ಶಿವಕುಮಾರ್, ಸoಘದ ಅಧ್ಯಕ್ಷ ಷಡಕ್ಷರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


Share this with Friends

Related Post