Fri. Nov 1st, 2024

ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ತಕರಾರಿಲ್ಲ:ದೇವೇಗೌಡ

Share this with Friends

ಬೆಂಗಳೂರು, ಮೇ.18: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ
ಮಾತನಾಡಿದ ಅವರು, ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ತಕರಾರಿಲ್ಲ, ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ
ಎಂದು ಮಾರ್ಮಿಕವಾಗಿ ಹೇಳಿದರು.

ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ, ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದು ಸರಿಯಲ್ಲ ಎಂದರು.

ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ, ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲ್ಲ, ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು,ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಹೇಳಿದ್ದಾರೆ ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಗೌಡರು ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ 100 ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದರು.

ದೇವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನ ಮಾಧ್ಯಮದಲ್ಲಿ ನೋಡಿದ್ದೇವೆ. ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ನನ್ನಲ್ಲಿದೆ ಎಂದು ‌ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಕಡೆ ಪ್ರಚಾರ ಮಾಡಿದ್ದೇನೆ ಫಲಿತಾಂಶ ಬಂದ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇನೆ. ಅಲ್ಲಿಯವರೆಗೆ ನಾನು ಯಾರನ್ನೂ ಭೇಟಿ ಮಾಡುವುಲ್ಲ ಎಂದು ದೇವೇಗೌಡರು ಮಾಧ್ಯಮದವರಿಗೆ ತಿಳಿಸಿದರು.


Share this with Friends

Related Post