ನವದೆಹಲಿ: ಜೆಡಿಎಸ್ ನಾಯಕರಾದ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ ವಿಶಾಲ ಮನೋಭಾವವಿರಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ತತ್ವಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ಕಾಂಗ್ರೆಸ್ ಈ ಹಿಂದೆ ದೇವೇಗೌಡರನ್ನು ಪ್ರಧಾನಿಯನ್ನಾಗಿ ಹಾಗೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ಕಾಂಗ್ರೆಸ್ ನೀಡಿದ ಈ ದೊಡ್ಡ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ಅವರು ವಿಫಲರಾದರು ಎಂದು ಹೇಳಿದರು.
ಮೈತ್ರಿ ಸರ್ಕಾರವನ್ನು ತಾಳ್ಮೆ ಮತ್ತು ವಿಶ್ವಾಸದಿಂದ ಮುನ್ನಡೆಸುವುದು ಅವರ ಜವಾಬ್ದಾರಿಯಾಗಿತ್ತು. ಆದರೆ, ಸಮನ್ವಯದ ಕೊರತೆಯಿಂದಾಗಿ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು. ಅಧಿಕಾರ ಉಳಿಸಿಕೊಳ್ಳಲು ಬೇಕಾದ ಧೈರ್ಯ ಮತ್ತು ಸಾಮರ್ಥ್ಯ ಅವರಲ್ಲಿ ಇರಲಿಲ್ಲ ಎಂದು ಶಿವಕುಮಾರ್ ಲೇವಡಿ ಮಾಡಿದರು

