Mon. Dec 23rd, 2024

ವಿಪತ್ತು ನಿರ್ವಹಿಸಲು ಸಜ್ಜಾಗಿ: ಅಧಿಕಾರಿಗಳಿಗೆ ಕೃಷ್ಣಬೈರೇಗೌಡ ಸೂಚನೆ

Share this with Friends

ಮೈಸೂರು ಜು.2: ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಜ್ಜಾಗಬೇಕೆಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖಾ ಪ್ರಗತಿಪರಿಶೀಲನಾ ಸಭೆಯಲ್ಲಿ‌ ಸಚಿವರು ಈ ಸೂಚನೆ ನೀಡಿದರು.

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ,ಆದರೆ ಮಳೆಯಿಂದ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಜನರಿಗೆ ಸಕಾಲದಲ್ಲಿ ಕೆಲಸ ಮಾಡಿ ಅವರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಇಲಾಖೆಯ ಪ್ರಮುಖ ಜವಾಬ್ಧಾರಿ ಆಗಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಶೇಕಡಾ 15 ರಷ್ಟು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳು ಮಾತ್ರ ಖಾಲಿ ಇವೆ. ಗ್ರಾಮ ಆಡಳಿತಾಧಿಕಾರಿ ಗಳು ವಿವಿದೆಡೆ ನಿಯೋಜನೆಯ ಮೇಲೆ ಇದ್ದರೆ ಅವರನ್ನು ಮೂಲ ಹುದ್ದೆಗಳಿಗೆ ಜಿಲ್ಲಾಧಿಕಾರಿಗಳು ಕರೆಸಿಕೊಳ್ಳುವಂತೆ ಕೃಷ್ಣಬೈರೇಗೌಡ ಆದೇಶಿಸಿದರು.

ಲಾಂಡ್ ಬೀಟ್ ಆ್ಯಪ್ ನಲ್ಲಿ ರಾಜ್ಯದಲ್ಲಿ ಇರುವ ಸರ್ಕಾರಿ ಆಸ್ತಿಗಳನ್ನು ಅಪ್ಲೋಡ್ ಮಾಡಬೇಕು. ಜುಲೈ ಅಂತ್ಯದ ಒಳಗೆ ಪ್ರತಿ ಗ್ರಾಮದಲ್ಲಿ ಇರುವ ಸರ್ಕಾರಿ ಆಸ್ತಿಗಳ ಮಾಹಿತಿಯನ್ನು ಪ್ರತಿ ಗ್ರಾಮಪಂಚಾಯತ್ ಗಳ ಬೋರ್ಡ್ ಗಳಲ್ಲಿ ಹಾಗೂ ನಮ್ಮ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು ಎಂದು ತಿಳಿಸಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಮಾತನಾಡಿ ಸರ್ಕಾರದ ವಿವಿಧ ಉದ್ದೇಶಗಳಿಗೆ ಕಾಯ್ದಿರಿಸಿರುವ ಭೂಮಿಯನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು ಎಂದು ಸಲಹೆ ನೀಡಿದರು.

ವಿಪತ್ತು ನಿರ್ವಹಣೆ ಯ ಪ್ರದಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮಾತನಾಡಿ ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಈ ಸಂಧರ್ಭದಲ್ಲಿ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಹಾಗೂ ಭೂ ಕುಸಿತ ಕಂಡುಬರುವ ಸಾಧ್ಯತೆ ಇದೆ,ಹಾಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮೈಸೂರು ವಿಭಾಗದ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Share this with Friends

Related Post