ಬೆಂಗಳೂರು: ಪಕ್ಷದ ಶಿಸ್ತು ಮೀರಿ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡುವ ಶಾಸಕರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಸಿದ್ದಾರೆ.
ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಪಕ್ಷದ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಬಾರದು. ಶಾಸಕರ ಭವಿಷ್ಯ ಇರುವುದು ಪಕ್ಷದಲ್ಲೇ ಹೊರತು ಮಾಧ್ಯಮಗಳ ಮುಂದಲ್ಲ” ಎಂದು ಮಾರ್ಮಿಕವಾಗಿ ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷೆ ಬಗ್ಗೆ ಪ್ರತಿಕ್ರಿಯೆ:
ಸುಮಾರು 25 ಶಾಸಕರು ದೆಹಲಿಗೆ ಭೇಟಿ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಸಚಿವ ಸ್ಥಾನ ಕೇಳುವುದು ಪ್ರಜಾಪ್ರಭುತ್ವದಲ್ಲಿ ಸಹಜ. ಹೊಸಬರಿಗೂ ಮಂತ್ರಿಯಾಗುವ ಅವಕಾಶ ಸಿಗಬಹುದು. ಆದರೆ ಇದು ಅದಕ್ಕೆ ಸೂಕ್ತ ಸಮಯವಲ್ಲ. ಪ್ರಸ್ತುತ ಚುನಾವಣೆಗಳು ನಡೆಯುತ್ತಿವೆ. ಮೊದಲು ಚುನಾವಣಾ ಜವಾಬ್ದಾರಿಗಳನ್ನು ಮುಗಿಸೋಣ, ಆನಂತರ ಈ ಬಗ್ಗೆ ಚರ್ಚಿಸಬಹುದು” ಎಂದರು.

ಇದೇ ವೇಳೆ ತಮಿಳುನಾಡು ಚುನಾವಣಾ ಪ್ರಚಾರದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ, ಪಕ್ಷದ ಸೂಚನೆಯಂತೆ ಅಲ್ಲಿಗೆ ಭೇಟಿ ನೀಡಿ ವರದಿ ಸಲ್ಲಿಸಿದ್ದೇನೆ ಎಂದು ತಿಳಿಸಿದರು.