Tue. Dec 24th, 2024

ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಡಿಕೆಶಿ ಚಾಲನೆ

Share this with Friends

ಬೆಂಗಳೂರು, ಮಾ.14:‌ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಪರಿಸ್ಥಿತಿ ಬಿಗಡಾಯಿಸುತ್ತಿದೆ,ಇದರ ಬೆನ್ನಲ್ಲೇ ಸರ್ಕಾರ ನೀರು ಉಳಿಸುವ ಅಭಿಯಾನ ಹಮ್ಮಿಕೊಂಡಿದೆ.

ಇಂದು ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.

ಬಿಬಿಎಂಪಿ,ಬಿ ಡ ಬ್ಲ್ಯೂ ಎಸ್ ಎಸ್ ಬಿ ಸಹಯೋಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಯಿತು.

ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ನೀರಿಗೆ ಭಯಪಡುವ ಅಗತ್ಯ ಇಲ್ಲ ಆದರೂ ಮೊನ್ನೆಚ್ಚರಿಕೆಯಿಂದ ಮಿತವಾಗಿ ನೀರು ಬಳಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ಮಾತನಾಡಿ,
ಕಾರ್ಖಾನೆ ಮತ್ತು ಕೈಗಾರಿಕೆಗಳಿಗೆ ಸಂಸ್ಕರಿಸಿ ಶುದ್ಧೀಕರಿಸಿದ ನೀರನ್ನು ಸರಬರಾಜು ಮಾಡಲಾಗುವುದು. ಸಂಪೂರ್ಣವಾಗಿ ಕುಡಿಯುವ ನೀರು ಪೂರೈಕೆಯಲ್ಲಿ ಅರ್ಧದಷ್ಟು ನೀರನ್ನು, ನೀರಿಲ್ಲದೆ ಸಮಸ್ಯೆ ಅನುಭವಿಸುತ್ತಿರುವ ಪ್ರದೇಶಗಳಿಗೆ ಪೂರೈಸಲು ಚಿಂತನೆ ನಡೆಸಲಾಗಿದೆ. ಇದು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ‌ವಿನೂತನ‌ ಚಿಂತನೆ ಇದರಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಹಾಗೂ‌ ಅಶೋಕ್,
ಬಸವರಾಜ್ ಮತ್ತಿತರರು ಹಾಜರಿದ್ದರು.


Share this with Friends

Related Post