Mon. Dec 23rd, 2024

ಮಾದಕ ದ್ರವ್ಯ‌ ಸೇವನೆ ಒಂದು ಪಿಡುಗು:ಪರಮೇಶ್ವರ್

Share this with Friends

ಬೆಂಗಳೂರು, ಜೂ.26: ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕ ವಸ್ತು ಕಳ್ಳ ಸಾಗಣೆ ವಿರೋಧಿ ದಿನವನ್ನು ಬೆಂಗಳೂರಿನಲ್ಲಿ ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.

ಮಾದಕ ವಸ್ತುಗಳ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲು ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಅಭಿಯಾನದಲ್ಲಿ ಹುಲಿ ವೇಷಧಾರಿಗಳು, ಯಕ್ಷಗಾನ ಕಲಾವಿದರು ಮತ್ತು ಪೊಲೀಸ್ ಬ್ಯಾಂಡ್ ಎಲ್ಲರನ್ನೂ ಆಕರ್ಷಿಸಿದರು.

ಈ ವೇಳೆ ಅಭಿಯಾನಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ದೇಶದಲ್ಲಿ ಐದು ಕೋಟಿಗೂ ಹೆಚ್ಚು ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ ಹಾಗಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾದಕ ದ್ರವ್ಯ ಸೇವಿಸುವುದು ಒಂದು ಪಿಡುಗಾಗಿ ಪರಿಣಮಿಸಿದೆ ಇದು ಯುವ ಸಮುದಾಯವನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಮಾತನಾಡಿ ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸಲು ದೃಢಸಂಕಲ್ಪದೊಂದಿಗೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್,ಸಿಐಡಿ ವಿಭಾಗದ ಡಿಜಿಪಿ ಡಾ.ಎಂ.ಎ ಸಲೀಂ ಮತ್ತಿತರರು ಪಾಲ್ಗೊಂಡಿದ್ದರು.


Share this with Friends

Related Post