Mon. Dec 23rd, 2024

ಮದ್ಯಪಾನ ಮಾಡಿ ವಾಹನ ಚಾಲನೆ: ದಂಡಹಾಕಿದ ಪೊಲೀಸರು

Share this with Friends

ಬೆಂಗಳೂರು: ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗವು ನ.4ರಿಂದ 10 ರವರೆಗೆ ಮದ್ಯಪಾನಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಿ ಸಾವಿರಾರು ರೂಪಾಯಿ ದಂಡ ವಿದಿಸಿ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಗರದ 50 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗೊಳ್ಳಲಾಯಿತು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ವಾಹನಗಳ ಸಂಖ್ಯೆ 53680, ದಾಖಲಿಸಿದ ಒಟ್ಟು ಪ್ರಕರಣಗಳು 794.

ಅತಿವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಚರಣೆಯಲ್ಲಿ
ಒಟ್ಟು 205 ಪ್ರಕರಣಗಳನ್ನು ದಾಖಲಿಸಲಾಗಿದೆ.ಒಟ್ಟಾರೆ
218000 ರೂ ದಂಡ ಸಂಗ್ರಹಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಮತ್ತು ಅತಿವೇಗ ವಾಹನ ಚಲಾಯಿಸುವವರ ಹಾವಳಿಯನ್ನು ತಡೆಗಟ್ಟಲು ಮತ್ತು ರಸ್ತೆ ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಸಹ
ಹಮ್ಮಿಕೊಳ್ಳಲಾಗುವುದು‌ ಸಂಚಾರಿ ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ.


Share this with Friends

Related Post