Tue. Dec 24th, 2024

ಪಾರಂಪರಿಕ ಕಟ್ಟಡಗಳ ಉಳಿಸುವುದು ಯುವ ಪೀಳಿಗೆಯ ಕರ್ತವ್ಯ-ದೇವರಾಜು

Share this with Friends

ಮೈಸೂರು: ಮೈಸೂರಿನಲ್ಲಿ ಹಿರಿಯರು ಕಷ್ಟ ಪಟ್ಟು ನಿರ್ಮಾಣ ಮಾಡಿರುವ ಅನೇಕ ಪಾರಂಪರಿಕ ಕಟ್ಟಡಗಳಿದ್ದು ಅವುಗಳನ್ನು ಸಂರಕ್ಷಿಸುವ ಕರ್ತವ್ಯ ಸರ್ಕಾರದ ಜೊತೆಗೆ ಯುವ ಪೀಳಿಗೆಯ ಮೇಲಿದೆ ಎಂದು ಪರಂಪರೆ ಇಲಾಖೆಯ ಆಯುಕ್ತ ದೇವರಾಜು ಹೇಳಿದರು.

ನಗರದ ಪುರಭವನದ ಬಳಿ ಆಯೋಜಿಸಲಾಗಿದ್ದ ಪಾರಂಪರಿಕ ನಡಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಟಾಂಗ ಸವಾರಿ, ಬೈಕ್ ಸವಾರಿ ಹಾಗೂ ಪಾರಂಪರಿಕ ನಡಿಗೆಯಿಂದ ಪರಂಪರೆಯನ್ನು ಉಳಿಸಲಾಗುವುದಿಲ್ಲ. ಈ ನಡಿಗೆಗಳು ಹಾಗೂ ಸವಾರಿಗಳು ಯುವಜನರಲ್ಲಿ ಅರಿವನ್ನು ಮೂಡಿಸಲು ಆಯೋಜಿಸುವ ಒಂದು ಕಾರ್ಯಕ್ರಮ ಇದರಲ್ಲಿ ತಿಳಿದುಕೊಂಡಂತಹ ಅಂಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಪಾರಂಪರಿಕ ಕಟ್ಟಡಗಳು, ನಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಉಳಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ನಮ್ಮ ಮೈಸೂರು ಸಂಸ್ಥಾನದ ರಾಜರು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಇದರ ಪ್ರತಿರೂಪವಾಗಿ ಇಂದು ಮೈಸೂರಿನಲ್ಲಿ ಹಲವಾರು ವಿಶಿಷ್ಟ ಮತ್ತು ಸುಂದರ ಕಟ್ಟಡಗಳಾದ ಜಗನ್ಮೋಹನ ಅರಮನೆ, ಮೈಸೂರು ಮೆಡಿಕಲ್ ಕಾಲೇಜು, ಕೆ ಆರ್ ಹಾಸ್ಪಿಟಲ್ ಸೇರಿದಂತೆ ಹಲವಾರು ಕಟ್ಟಡಗಳಿವೆ ಅವುಗಳನ್ನು ಉಳಿಸಿಕೊಂಡು ಹೋಗಬೇಕು ಇದರ ಬಗ್ಗೆ ಯುವ ಪೀಳಿಗೆಗಳಿಗೆ ಮಾಹಿತಿ ಕೊಡಬೇಕು. ಹಾಗೆ ಯುವ ಪೀಳಿಗೆಯು ಮಾಹಿತಿ ಪಡೆಯಲು ತಾವೇ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಸಂಗೀತ ವಿಶ್ವವಿದ್ಯಾನಿಲಯದ ಕುಲಪತಿ ನಾಗೇಶ್ ಬೆಟ್ಟಕೋಟೆ ಮಾತನಾಡಿದರು.

ಪಾರಂಪರಿಕ ನಡಿಗೆಯು
ರಂಗಾಚಾರ್ಲು ಪುರಭವನದಿಂದ ಪ್ರಾರಂಭವಾಗಿ ಪಾರಂಪರಿಕ ಕಟ್ಟಡಗಳ ಮುಂದೆ ಸಾಗಿತು.

ಪುರಾತತ್ವ, ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಕಟ್ಟಡಗಳ ಬಗ್ಗೆ ಮೊಬೈಲ್ ಮೂಲಕ ಮಾಹಿತಿ ತಿಳಿಯಲು ವಿ.ಆರ್ ಕಾರ್ಡ್ ಹೊರತರಲಾಗಿದೆ.

ಕಾರ್ಡ್ ನ ಹಿಂಭಾಗದಲ್ಲಿರುವ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಆಪ್ ಡೌನ್ಲೋಡ್ ಆಗುತ್ತದೆ. ಆಪ್ ನಲ್ಲಿರುವ ಕಣ್ಣಿನ ಸಿಂಬಲ್ ಅನ್ನು ಸ್ಕ್ಯಾನ್ ಮಾಡಿದಾಗ ಮೈಸೂರು ವಿಶ್ವ ವಿದ್ಯಾನಿಲಯ, ಅರಮನೆ ಸೇರಿದಂತೆ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಜೊತೆಗೆ ಅವುಗಳ ಮಾಹಿತಿ ಪಡೆಯಬಹುದಾಗಿದೆ. ಕಾರ್ಡ್ ನ ಬೆಲೆ 10 ರೂ. ಆಗಿದ್ದು, ಪುರಾತತ್ವ ಇಲಾಖೆಯಲ್ಲಿ ಪಡೆಯಬಹುದಾಗಿದೆ.


Share this with Friends

Related Post