Wed. Mar 12th, 2025

ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಸಿಎಂ ಸಿದ್ದರಾಮಯ್ಯ

Share this with Friends

ಬೆಂಗಳೂರು: ಮುಡಾ ಕುರಿತು ಇಡಿ ನೀಡಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾದುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಗರಂ ಆಗಿ ನುಡಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ, ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.






Share this with Friends

Related Post