Tue. Dec 24th, 2024

ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಈಶ್ವರಪ್ಪ ಉಚ್ಚಾಟನೆ

Share this with Friends

ಬೆಂಗಳೂರು,ಏ.22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಈಶ್ವರಪ್ಪ ಅವರನ್ನು ಆ ಪಕ್ಷ ಉಚ್ಚಾಟನೆ ಮಾಡಿದೆ.

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಆದೇಶದಲ್ಲಿ ತಿಳಿಸಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಯಲಿಲ್ಲ.

ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದರೂ ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

ಆದರೆ ಈ‌ ಕುರಿತು ಪ್ರತಿಕ್ರಿಯಿಸಿರುವ ಈಶ್ವರಪ್ಪ ನನಗೆ ಈತನಕ ಬಿಜೆಪಿಯಿಂದ ಯಾವುದೇ ನೋಟೀಸ್ ಬಂದಿಲ್ಲಾ ಉಚ್ಛಾಟಣೆ ನನಗೆ ಗೊತ್ತಿಲ್ಲ ಎಂದಿದ್ದಾರೆ.


Share this with Friends

Related Post