Mon. Dec 23rd, 2024

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ನಾಳೆ ನಾಮಪತ್ರ ಸಲ್ಲಿಕೆ

K. S. Eshwarappa
Share this with Friends

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ.

ನಾಳೆ 10 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಮೆರವಣಿಗೆ ನಡೆಸುತ್ತೇನೆ. ಸಾಮಾನ್ಯ ಕಾರ್ಯಕರ್ತ, ಮತದಾರರೇ ನನಗೆ ಸ್ಟಾರ್ ಪ್ರಚಾರಕರು. ನಾನು ಬಿಜೆಪಿ ಶುದ್ದೀಕರಣ ಆಗಬೇಕು ಅಂತಾ ಹೊರಗೆ ಬಂದು ಹೋರಾಟ ಮಾಡ್ತಿದ್ದೇನೆ ಎಂದು ಹೇಳಿದರು.


Share this with Friends

Related Post