Fri. Mar 6th, 2026

ಇನ್ನು ಪ್ರತಿ ಗ್ರಾಮವೂ ಗಾಂಧಿಗ್ರಾಮ:ಸಿಎಂ ಸಿದ್ದರಾಮಯ್ಯ

Share this with Friends

ಬೆಂಗಳೂರು:ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮ ಗಾಂಧಿಯವರ ಹೆಸರು ನಾಮಕರಣ ಮಾಡಲಿದ್ದು, ಇನ್ನು ಪ್ರತಿ ಗ್ರಾಮವೂ ಗಾಂಧಿಗ್ರಾಮ ಆಗಲಿದೆ ಬಜೆಟ್ ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಂದಿನ ಬಜೆಟ್ ನ ಘೋಷಣೆಯಲ್ಲಿ 6000 ಗ್ರಾಮ ಪಂಚಾಯತಿಗಳ ಕಚೇರಿಗೂ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು.ಅಂದು ನಾಥೂರಾಮ ಗೋಡ್ಸೆಯ ಗುಂಡೇಟಿಗೆ ಮಹಾತ್ಮ ಗಾಂಧಿ ಬಲಿಯಾದ ಬಳಿಕ ಹೇಗೆ ಮನೆ ಮನೆಗೆ ಗಾಂಧಿ ವಿಚಾರಧಾರೆಗಳು ಹೆಚ್ಚೆಚ್ಚು ತಲುಪಿತೋ, ಇನ್ನು ಮುಂದೆ ಹಾಗೆಯೇ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಗಾಂಧೀಜಿಯವರ ಹೆಸರು ರಾರಾಜಿಸಲಿದೆ. ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು. ಎಂದರು.

ಗ್ರಾಮೀಣ ಆರ್ಥಿಕತೆಗೆ ಬಲ ತುಂಬಿ, ಆ ಮೂಲಕ‌ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿತ್ತು. ಈ ಚಿಂತನೆಯ ಮೇಲೆ ಜೀವ ತಳೆದದ್ದೇ ಮನರೇಗಾ ಯೋಜನೆ. ಬಡಜನರಿಗೆ ಕೆಲಸವನ್ನು ಸಂವಿಧಾನಾತ್ಮಕ ಹಕ್ಕನ್ನಾಗಿಸಿ, ವರ್ಷದ ಯಾವುದೇ ದಿನಗಳಲ್ಲಿ, ಅವರು ವಾಸಿಸುವ ಸ್ಥಳದಲ್ಲೇ ಉದ್ಯೋಗ ಒದಗಿಸುವುದು ಮನರೇಗಾ ಯೋಜನೆಯ ಮೂಲ‌ ಆಶಯ. ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ಕೇವಲ ಮಹಾತ್ಮ ಗಾಂಧಿಯವರ ಹೆಸರಿನ ಯೋಜನೆ ರದ್ದು ಮಾಡಿರುವುದಲ್ಲ, ಬದಲಿಗೆ ಗ್ರಾಮೀಣ ಆರ್ಥಿಕತೆಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ಟೀಕಿಸಿದರು.

ಅಳಿಸಿ ಹಾಕಲು ಗಾಂಧಿ ಎಂಬುದು ಬರಿ ಹೆಸರಲ್ಲ, ಅನ್ಯಾಯ – ಅಸತ್ಯಗಳ ವಿರುದ್ಧದ ಹೋರಾಟಕ್ಕೆ ಕೋಟ್ಯಂತರ ಭಾರತೀಯರಿಗೆ ಇಂದಿಗೂ ಪ್ರೇರಕ ಶಕ್ತಿಯಾಗಿದೆ. ಮುಂದೆಯೂ ಗಾಂಧಿಯೇ ಈ ದೇಶದ ಆದರ್ಶ ಮತ್ತು ಅಸ್ಮಿತೆ  ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.


Share this with Friends

Related Post