ಬೆಂಗಳೂರು, ಮಾ.26: ಮತದಾನದ ಮಹತ್ವವನ್ನು ಕುರಿತು ಪ್ರತಿಯೊಬ್ಬರು ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿದರು
2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರು,ಇತರೆ ಅಧಿಕಾರಿಗಳಿಗೆ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿಂದು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಬೆಂಗಳೂರಿನ ಜನರು ಮತದಾನದಿಂದ ಯಾವಾಗಲೂ ದೂರ ಉಳಿಯುತ್ತಾರೆ, ಹಾಗಾಗಿ ಅವರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಮತದಾನ ನಮ್ಮ ಮೂಲಭೂತ ಹಕ್ಕು, ಅದನ್ನು ಅನಗತ್ಯವಾಗಿ ಹಾಳು ಮಾಡದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮನವಿ ಮಾಡಿದರು.
ಮನೆಮನೆಗೂ ಅಧಿಕಾರಿಗಳು ಭೇಟಿ ನೀಡಿ ಜನರ ಮನವಲಿಸಿ, ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಮಾಡಬೇಕು ಎಂದು ತುಷಾರ್ ಗಿರಿನಾಥ್ ತಿಳಿಸಿದರು.
ಕಾರ್ಯಾಗಾರದಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು,ನೊಡೆಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ನೋಡಲ್ ಅಧಿಕಾರಿ ರಾಮಾಮಣಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.