Fri. Nov 1st, 2024

ಪ್ರತಿಯೊಬ್ಬರೂ ನಿಸರ್ಗ ಪ್ರೀತಿಸಿ, ರಕ್ಷಿಸಿ: ಸಿದ್ದರಾಮಯ್ಯ ಕರೆ

Share this with Friends

ಬೆಂಗಳೂರು, ಜು.3: ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು,ಇದು ಕಷ್ಟದ ಕೆಲಸವಲ್ಲ,ಆದರೆ ಎಲ್ಲರೂ ಮನಸ್ಸು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮ ಉದ್ಘಾಟಿಸಿ ರಾಜ್ಯ ಪರಿಸರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಸಿಎಂ ಮಾತನಾಡಿದರು.

ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಪ್ರತಿಯೊಬ್ಬರೂ ಪಾಲ್ಗೊಂಡರೆ ಮಾತ್ರ ಪರಿಸರ ಸಂರಕ್ಷಣೆ ಮಾಡಲು ಸಾಧ್ಯ, ಸರ್ಕಾರ ಮತ್ತು ಸಾರ್ವಜನಿಕರು ಒಟ್ಟಾಗಿ ಈ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಸಿಎಂ ತಿಳಿಸಿದರು.

ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಸಂರಕ್ಷಣೆಯ ಲಾಭಗಳೇನು ಎಂದು ತಿಳಿಸಿ ವಿದ್ಯಾರ್ಥಿಗಳು ಪರಿಸರ, ಕಾಡು, ಜನಜೀವನ, ಪ್ರಾಣಿ ಸಂಕುಲಗಳ ಬಗ್ಗೆ ಅರಿತುಕೊಳ್ಳಬೇಕು ಎಂದು ತಿಳಿಹೇಳಿದರು.

ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚೆಗೆ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ನಗರಪಾಲಿಕೆ, ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ ಎಂದು ಮುಖ್ಯ ಮಂತ್ರಿಗಳು ಹೇಳಿದರು.


Share this with Friends

Related Post