Mon. Dec 23rd, 2024

ಬೆಂಗಳೂರಲ್ಲಿ ಉಡುಪಿ ಮೂಲದ ತಾಯಿ-ಮಕ್ಕಳು ಸೇರಿ ಮೂವರು ಆತ್ಮಹತ್ಯೆಗೆ ಶರಣು

Family Suicide
Share this with Friends

ಬೆಂಗಳೂರು,ಮಾ,20 : ತಾಯಿ ಹಾಗೂ ಮಕ್ಕಳಿಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತರು.

ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ (ಮಾ.19) ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಸುಕನ್ಯಾ, ನಿಖಿತ್ ಹಾಗೂ ನಿಶಿತ್ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಮೃತದೇಹಗಳು ಸುಟ್ಟಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಮೂವರ ನಿಗೂಢ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೂವರ ಸಾವಿನ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಸಂಬಂಧಿಕರು ಹಾಗೂ ಸ್ಥಳೀಯರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಅಲ್ಲದೇ ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​​ ಸಿಬ್ಬಂದಿ ಮತ್ತು ಸೋಕೋ ತಂಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share this with Friends

Related Post