Tue. Jul 21st, 2026

ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ರಾಜಕೀಯ ಉದ್ದೇಶದಿಂದ ಜೆಪಿಸಿ ಭೇಟಿ; ಡಿ.ಕೆ ಶಿ

Share this with Friends

ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದೆ, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ,ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ಬಗ್ಗೆ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.

ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.


Share this with Friends

Related Post