Fri. Dec 27th, 2024

ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ:ಅಶೋಕ್

Share this with Friends

ಬೆಂಗಳೂರು, ಏ.18: ಬೆಂಗಳೂರಿನಲ್ಲಿ ಜೈ ಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಯುವಕರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸ
ಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಕ್ರಮ ತೆಗೆದುಕೊಳ್ಳದಿದ್ದರೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು, ಪಾಕಿಸ್ತಾನ ಬೆಂಬಲಿತರು, ಟಿಪ್ಪು ಸಿದ್ಧಾಂತವಾದಿಗಳು ಹೆಚ್ಚಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಭಯೋತ್ಪಾದನೆ ಹಾಗೂ ಬಾಂಬ್‌ ಸ್ಫೋಟದಂತಹ ಘಟನೆಗಳು ನಡೆಯುತ್ತಿರುವುದು ಬಹಳ ಆತಂಕಕಾರಿ. ಇಡೀ ದೇಶದಲ್ಲಿ ಶ್ರೀರಾಮ ನವಮಿ ಆಚರಣೆ ಮಾಡಲಾಗಿದೆ. ನನ್ನ ಮನೆಯಲ್ಲೂ ರಾಮನವಮಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಜೈ ಶ್ರೀರಾಮ್‌ ಹೇಳಬಾರದು ಅಲ್ಲಾಹು ಅಕ್ಬರ್‌ ಎನ್ನಬೇಕು ಎಂದು ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವೇನೊ ಎಂಬ ಅನುಮಾನ ಶುರುವಾಗಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಇಸ್ಲಾಮಿಕ್‌ ಮೂಲಭೂತವಾದಿಗಳ ಕೈಗೆ ಧಾರೆ ಎರೆದುಕೊಟ್ಟಿದ್ದಾರೆ. ಹಿರಿಯ ನಾಯಕ ಲಕ್ಷ್ಮಣ ಸವದಿ ಭಾರತಮಾತೆಗೆ ಜೈ ಎನ್ನಲು ಅನುಮತಿ ಕೇಳುತ್ತಾರೆ. ಡಿ.ಕೆ.ಸುರೇಶ್‌ ಅವರು ಮನೆಯಲ್ಲಿ ರಾಮನ ಪೂಜೆ ಮಾಡಲ್ಲ ಎನ್ನುತ್ತಾರೆ. ಅವರು ಕಲ್ಲು ಬಂಡೆಯನ್ನೇ ಪೂಜೆ ಮಾಡಲು ಇಟ್ಟುಕೊಳ್ಳಬಹುದು. ರಾಮ ಇಲ್ಲದೆ ಹನುಮನಿಲ್ಲ, ಹನುಮ ಇಲ್ಲದೆ ರಾಮನಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಹನುಮನ ದೇವಸ್ಥಾನವಿದೆ. ಈ ರೀತಿ ಹಿಂದೂಗಳನ್ನು ಅವಹೇಳನ ಮಾಡಿದ್ದರಿಂದಲೇ ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ ಎಂದು ದೂರಿದರು.

ಹಿಂದೂಗಳು ಕರ್ನಾಟಕದಲ್ಲಿ ಭಯದಿಂದ ಬದುಕುವ ವಾತಾವರಣ ಸೃಷ್ಟಿಯಾಗಿದೆ. ಚಿಕ್ಕಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರು ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ನಿಮ್ಮನ್ನು ರಕ್ಷಣೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಸರ್ಕಾರ ಮೂಲಭೂತವಾದಿಗಳಿಗೆ ತಿಳಿಸಿದ್ದಾರೆ. ಆದ್ದರಿಂದಲೇ ಹಿಂದೂಗಳನ್ನು ಬಹಿರಂಗವಾಗಿ ಬೆದರಿಸಲಾಗುತ್ತಿದೆ. ಬಹುಸಂಖ್ಯಾತರನ್ನು ಸರ್ಕಾರ ಕಡೆಗಣಿಸಿದೆ ಎಂದು ಅಶೋಕ್ ಕಿಡಿಕಾರಿದರು.

ಕಾಂಗ್ರೆಸ್‌ ಇನ್ನು ಇದು ಸಣ್ಣ ಘಟನೆ ಎಂದು ಹೇಳಲು ಆರಂಭಿಸುತ್ತಿದೆ. ಕೂಡಲೇ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಆಗ ಮಾತ್ರ ಸರ್ಕಾರದ ಮೇಲೆ ನಂಬಿಕೆ ಬರಲು ಸಾಧ್ಯ.

ಸಿಎಂ ಸಿದ್ದರಾಮಯ್ಯ ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಆದರೆ ಡಿ.ಕೆ.ಸುರೇಶ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಏನು ಮಾತಾಡಿದ್ದಾರೆ ಎಂಬುದನ್ನು ನೋಡಲಿ ಎಂದು ತಿರುಗೇಟು ನೀಡಿದರು.


Share this with Friends

Related Post