Fri. Nov 1st, 2024

ಇಮ್ಮಾವು ಗ್ರಾಮದಲ್ಲಿ ಫಿಲಂ ಸಿಟಿ-ಸಿಎಂ

Share this with Friends

ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಫಿಲಂ ಸಿಟಿ ನಿರ್ಮಿಸಲಾಗುವುದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು ‌

ಮೈಸೂರು ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ,
ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ಭೂಮಿ ಮೀಸಲಿರಿಸಲಾಗಿತ್ತು,ಈಗ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಚಿತ್ರರಂಗದ ಬೆಳವಣಿಗೆಗೆ ಸರ್ಕಾರ ಬೆಂಬಲ ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೇ ಹೋಗಿ ವೀಕ್ಷಿಸಬೇಕೆಂದು ಸಿಎಂ ಸಲಹೆ ನೀಡಿದರು.

ದಸರಾ ಚಲನಚಿತ್ರೋತ್ಸವ ಅಕ್ಟೋಬರ್-04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು.

ನಟ, ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಇದೇ ವೇಳೆ‌ ಸಿಎಂ ತಿಳಿಸಿದರು.

ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಇದೇ ವೇಳೆ ಸಿಎಂ ಶುಭ ಕೋರಿದರು‌


Share this with Friends

Related Post