Fri. Nov 1st, 2024

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್

Share this with Friends

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಪ್ರಾರಂಭವಾಗಿದೆ.

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಇತರರ ವಿರುದ್ಧ ಶುಕ್ರವಾರ ಮಧ್ಯಾಹ್ನ ಎಫ್‌ಐಆರ್‌ ದಾಖಲಿಸಿದ್ದಾರೆ.

ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚಿಸಿತ್ತು.

ಎಫ್ಐಆರ್ ಯಾರ ವಿರುದ್ಧ, ವಿವರ ಇಲ್ಲಿದೆ:
ಸಿದ್ದರಾಮಯ್ಯ, ಮುಖ್ಯಮಂತ್ರಿ (A1)
ಪಾರ್ವತಿ ಬಿಎಂ, ಸಿದ್ದರಾಮಯ್ಯ ಪತ್ನಿ(A2)
ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಮಯ್ಯ, ಬಾಮೈದ(A3)
ದೇವರಾಜು, ಮಾರಾಟಗಾರ, ನಕಲಿ ಭೂ ಮಾಲೀಕ (A4) ಮತ್ತು ಇತರರು‌.
ಕಾಯ್ದೆಗಳು:
ಭ್ರಷ್ಟಾಚಾರ ತಡೆ ಕಾಯ್ದೆ 1988,
ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲು,
ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ,
ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು,
ಸೆಕ್ಷನ್ 403 ಆಸ್ತಿಯ ದುರ್ಬಳಕೆ,
ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ
ಸೆಕ್ಷನ್ 420 ವಂಚನೆ,
ಸೆಕ್ಷನ್ 426 ದುಷ್ಕೃತ್ಯವೆಸಗುವುದು,
ಸೆಕ್ಷನ್ 465 ಫೋರ್ಜರಿ,
ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಫೋರ್ಜರಿ,
ಸೆಕ್ಷನ್ 340 ಅಕ್ರಮ ಬಂಧನ,
ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು.


Share this with Friends

Related Post