Sat. Nov 2nd, 2024

ಕಾಪಿರೈಟ್ ಉಲ್ಲಂಘನೆ: ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್

Share this with Friends

ಬೆಂಗಳೂರು, ಜು.15: ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾದ ನವೀನ್ ಕುಮಾರ್ ದೂರು ನೀಡಿದ್ದಾರೆ.

ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ‘ಗಾಳಿ ಮಾತು’ ಮತ್ತು ‘ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡುಗಳ ಬಳಕೆ ಬಗ್ಗೆ ಮಾತುಕತೆಯಾಗಿತ್ತು. ಆದರೆ ಈ ಸಿನಿಮಾದ ಹಾಡಿನ ಬಳಕೆ ಬಗ್ಗೆ ಮಾತುಕತೆ ಸರಿ ಹೊಂದದೇ ಇದ್ದರಿಂದ ಅಲ್ಲಿಗೆ ನಿಲ್ಲಿಸಲಾಗಿತ್ತು.

ಬಳಿಕ 2024ರ ಮಾರ್ಚ್ ನಲ್ಲಿ ಒಟಿಟಿಯಲ್ಲಿ ರಕ್ಷಿತ್ ಶೆಟ್ಟಿ ಅವರ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು, ಆಗ ಸಿನಿಮಾದಲ್ಲಿ ಎರಡು ಚಿತ್ರಗಳ ಹಾಡು ಬಳಕೆಯಾಗಿರುವುದು ಗೊತಗತಾಯಿತು ಎಂದು ದೂರುದಾರರು ತಿಳಿಸಿದ್ದಾರೆ


Share this with Friends

Related Post