Fri. Nov 1st, 2024

ಪೋರ್ಶೆ ಕಾರು ಅಪಘಾತ ಪ್ರಕರಣ: ಇಬ್ಬರು ವೈದ್ಯರು ಅರೆಸ್ಟ್

Share this with Friends

ಪುಣೆ,ಮೇ27: ಪೋರ್ಶೆ ಕಾರು ಅಪಘಾತ ಪ್ರಕರಣ ಸಂಬಂಧ ಇಬ್ಬರು ವೈದ್ಯರನ್ನು ಪುಣೆ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

ಸಾಸೂನ್ ಆಸ್ಪತ್ರೆಯ ಡಾ. ಶ್ರೀಹರಿ ಹಾರ್ಲರ್ ಮತ್ತು ಡಾ. ಅಜಯ್ ತಾವ್ರೆ ಎಂಬವರನ್ನು ಬಂಧಿಸಲಾಗಿದೆ.

ಡಾ. ಅಜಯ್ ತಾವ್ರೆ, ಸಸೂನ್ ಆಸ್ಪತ್ರೆಯಲ್ಲಿ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ಮುಖ್ಯಸ್ಥ, ಡಾ. ಶ್ರೀಹರಿ ಹರ್ಲರ್ ತುರ್ತು ವಿಭಾಗದಲ್ಲಿ ಮುಖ್ಯ ವೈದ್ಯಕೀಯ ಅಧಿಕಾರಿ.

ಪುಣೆಯ ಸಸೂನ್ ಆಸ್ಪತ್ರೆಯ ವೈದ್ಯರ ವಿರುದ್ಧ ಅಪ್ರಾಪ್ತರ ರಕ್ತದ ಮಾದರಿ ವರದಿ ತಿರುಚಿರುವ ಆರೋಪ ಕೇಳಿ ಬಂದಿತ್ತು.

ಅಪಘಾತಕ್ಕೆ ಕಾರಣನಾದ ಅಪ್ರಾಪ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಪುಣೆಯ ಸಸೂನ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಈ ವೇಳೆ ಆತನ ಕುಟುಂಬಸ್ಥರು ವೈದ್ಯರಿಗೆ ಹಣದ ಆಮಿಷ ವೊಡ್ಡಿದ್ದಾರೆ ಎಂ ಆರೋಪ ಕೇಳಿಬಂದಿತ್ತು. ಈ ಸಂಬಂಧ ಈ ಇಬ್ಬರು ವೈದ್ಯರ ಸುದೀರ್ಘ ವಿಚಾರಣೆಯ ನಂತರ ಬಂಧಿಸಲಾಯಿತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಮೇ 19 ರಂದು ಮುಂಜಾನೆ 3.30 ರ ಸುಮಾರಿಗೆ ಕುಡಿದ ಅಮಲಿನಲ್ಲಿ ಅಪ್ರಾಪ್ತ ಆರೋಪಿಯು ತನ್ನ ಐಷಾರಾಮಿ ಪೋರ್ಶೆ ಕಾರಿನಿಂದ ಇಬ್ಬರ ಹತ್ಯೆಗೆ ಕಾರಣನಾಗಿದ್ದ.

ಆರಂಭದಲ್ಲಿ ಆರೋಪಿ ಮದ್ಯ ಸೇವಿಸಿಲ್ಲ ಎಂದು ತಿಳಿದು ಬಂದಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಆತ ತನ್ನ ಸ್ನೇಹಿತರೊಂದಿಗೆ ಬಾರ್‌ನಲ್ಲಿ ಮದ್ಯ ಸೇವಿಸುತ್ತಿರುವುದು ಕಂಡುಬಂದಿತ್ತು.

ಈ ಪ್ರಕರಣದಲ್ಲಿ ಆರೋಪಿಯ ಅಜ್ಜ ಮತ್ತು ತಂದೆ ಮತ್ತು ಇಬ್ಬರು ವೈದ್ಯರು ಸೇರಿದಂತೆ ಒಟ್ಟು 9 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.

ಇವರಲ್ಲಿ ಪಬ್ ಮಾಲೀಕರು, ಇಬ್ಬರು ವ್ಯವಸ್ಥಾಪಕರು ಮತ್ತು ಇಬ್ಬರು ಸಿಬ್ಬಂದಿ ಸೇರಿದ್ದಾರೆ.


Share this with Friends

Related Post