Sun. Dec 22nd, 2024

SM Krishna Passed Away: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ

Share this with Friends

ಬೆಂಗಳೂರು, ಡಿ. 10 : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ (92) ಇಂದು ಮುಂಜಾನೆ 3 ಗಂಟೆಯ ಸಮಯದಲ್ಲಿ ನಗರದ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶ್ವಾಸಕೋಶದ ಸೋಂಕಿ ಕಾಣಿಸಿಕೊಂಡದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೈಸೂರಿನ ಡಾ. ಸತ್ಯನಾರಾಯಣ, ಸುನೀಲ್ ಕಾರಂತ್ ಅವರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ಶ್ವಾಸಕೋಶದ ಸೋಂಕಿನಿಂದ ಉಸಿರಾಟದ ತೊಂದರೆಯು ಉಲ್ಬಣಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದರು.

ಎಸ್ ಎಂ ಕೃಷ್ಣ ಅವರು 1999 ರಿಂದ 2004 ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಸೇವೆಸಲ್ಲಿಸಿದ್ದರು. ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು, ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಕೆಲಸ ಮಾಡಿದವರು. ಪ್ರಮುಖ ವಾಗಿ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸು ಕಂಡು ಅದನ್ನ ತಕ್ಕ ಮಟ್ಟಿಗೆ ಶ್ರಮಿಸಿದವರು. ಇವರ ಅವಧಿಯಲ್ಲಿ ಬೆಂಗಳೂರು ಐಟಿ-ಬಿಟಿ ವಲಯವಾಗಿ ಬೆಳೆಯಿತು.


Share this with Friends

Related Post