ಮೈಸೂರು,ಏ.3: ಜಿಟಿಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂಬ ಸಿಎಂ ಮಾತಿಗೆ ಜಿ.ಟಿ.ದೇವೇಗೌಡ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ, ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡುತ್ತೇನೆ, ಇಬ್ಬರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲೋಣಾ ಎಂದು ಪಂಥಾಹ್ವಾನ ನೀಡಿದರು.
ಇಬ್ಬರೂ ಸ್ಪರ್ಧಿಸೋಣ,ಯಾರು ಗೆಲುತ್ತಾರೆ ನೋಡೇ ಬಿಡೋಣ ಎಂದು ಸಿದ್ದರಾಮಯ್ಯ ಅವರಿಗೆ ಜಿ.ಟಿ.ಡಿ ಸವಾಲು ಹಾಕಿದರು.
ಸಿದ್ದರಾಮಯ್ಯ ಅವರಿಗೆ
ಅಭಿವೃದ್ಧಿ ಅಂದರೆ ಏನು ಅಂತಾನೆ ಗೊತ್ತಿಲ್ಲ,
ಅಭಿವೃದ್ಧಿ ಮಾಡದೆ ರಾಜಕೀಯದಲ್ಲಿ ಬೆಳೆದಿದ್ದು ಅಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಹರಿಹಾಯ್ದರು.
ಚಾಮುಂಡೇಶ್ವರಿ ಕ್ಷೇತ್ರಕ್ಕೆ ನೀವು ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತ ಪತ್ರ ಹೊರಡಿಸಿ ಎಂದು ಆಗ್ರಹಿಸಿದ ಜಿಟಿಡಿ,ಚಾಮುಂಡೇಶ್ವರಿ
ಉಪ ಚುನಾವಣೆ ವೇಳೆ ನಾನು ಜೆಡಿಎಸ್ ಪರ ಪ್ರಚಾರಕ್ಕೆ ಹೋಗಲಿಲ್ಲ, ಅದಕ್ಕಾಗಿ ಆಗ ನೀವು ಗೆದ್ದಿರಿ,ನನ್ನನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಎಷ್ಟು ಸಲ ಪ್ರಯತ್ನ ಪಟ್ಟಿದ್ದೀರಿ,ನನ್ನ ಕಾಯೋಕೆ ದೈವ ಇಲ್ವಾ, ಧರ್ಮ ಇಲ್ವಾ ಅದು ಹೇಗೆ ಸೋಲಿಸ್ತೀರಿ ನೀವು ನನ್ನನ್ನ ಎಂದು ಕಾರವಾಗಿ ಪ್ರಶ್ನಿಸಿದರು.
ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಮೇಲೆ ಮುಗಿದು ಹೋಯ್ತು,
ಯಾಕೆ ಪದೇ ಪದೇ ಹೀಗೆ ಮಾತನಾಡುತ್ತೀರಿ,
ಎಂದು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿನ
ಬಿಇಒ, ತಹಶಿಲ್ದಾರ್ ಎಲ್ಲಾ ಸಿಎಂ ಬಂಧುಗಳು.ಎಷ್ಟು ದಿನ ಸಿಎಂ ಆಗಿ ಇರುತ್ತೀರಿ ನೋಡೋಣ ಎಂದು ತಿರುಗೇಟು ನೀಡಿದರು.
35 ಸಾವಿರದಿಂದ ನಾನು ನಿಮ್ಮನ್ನು ಸೋಲಿಸಿದ್ದಾಗಲೂ ನಿಮ್ಮ ಬಗ್ಗೆ ಅಗೌರವದಿಂದ ಮಾತಾಡಿಲ್ಲ,
ಹೆಸರಿಗೆ ನಾನು ಶಾಸಕ,ಚಾಮುಂಡೇಶ್ವರಿಯಲ್ಲಿ
ಎಲ್ಲಾ ನಿಮ್ದೆ ಅಲ್ವಾ ಎಂದು ಮಾರ್ಮಿಕವಾಗಿ ನುಡಿದರು.
ಯತೀಂದ್ರ ನಮ್ಮ ಕ್ಷೇತ್ರದಲ್ಲಿ
ಕಮೀಷನ್ ದಂಧೆ ಮಾಡುತ್ತಿದ್ದಾರೆ,ಇದು 60 ಪರ್ಸೆಂಟ್ ಸರಕಾರ ಎಂದು ವಾಗ್ದಾಳಿ ನಡೆಸಿದರು.
ವರುಣದಲ್ಲಿ ನೀವು
ಬಿಜೆಪಿಯ ದೊಡ್ಡವರ ಬೆಂಬಲ ಪಡೆದು ಗೆದ್ದಿಲ್ವಾ ಹೇಳಿ ನೋಡೋಣ ಎಂದು ಜಿ.ಟಿ.ದೇವೇಗೌಡ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದರು.