Mon. Dec 23rd, 2024

ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ರಿಟರ್ನ್

Gali Janardhana Reddy
Share this with Friends

ಬೆಂಗಳೂರು.ಮಾ.24 : ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರುತ್ತಿರುವುದು ಖಾತ್ರಿಯಾಗಿದೆ. .ನಾಳೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಈ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಜಗದೀಶ್ ಶೆಟ್ಟರ್ ಬಳಿಕ ಮತ್ತೊಬ್ಬ ಬಿಜೆಪಿ ಮುಖಂಡನ ಘರ್ ವಾಪ್ಸಿಗೆ ವೇದಿಕೆ ಸಿದ್ಧವಾಗಿದೆ. ಅವರು ಬಿಜೆಪಿಗೆ ಬೇಷರತ್ ಆಗಿ ಸೇರಲಿದ್ದಾರೆ ಎಂದು ಹೇಳಲಾಗಿದೆ.

ಭಾನುವಾರ ಸಂಜೆ ಜನಾರ್ದನ ರೆಡ್ಡಿ ಅವರು ತಮ್ಮ ಬೆಂಬಲಿಗರ ಸಭೆ ಕರೆದಿದ್ದು ಸೋಮವಾರ ಅಥವಾ ಮಂಗಳವಾರ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೆಲ ದಿನಗಳ ಹಿಂದಷ್ಟೇ ಜನಾರ್ದನ ರೆಡ್ಡಿ ಅವರು ಬಿಜೆಪಿ ಹೈಕಮಾಂಡ್ ನಾಯಕರಾಗಿರುವ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಜನಾರ್ದನ ರೆಡ್ಡಿ ಅವರು, ಅಮಿತ್ ಶಾ ಅವರ ಆಹ್ವಾನದ ಹಿನ್ನೆಲೆಯಲ್ಲಿ ದಿಲ್ಲಿಗೆ ಆಗಮಿಸಿದ್ದೇನೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಈ ಭೇಟಿ ಮಾಡಿದ್ದು ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನ ಎಂದು ತಿಳಿಸಿದ್ದರು ಆದರೆ ಮತ್ತೆ ಬಿಜೆಪಿಗೆ ಸೇರುವ ವಿಚಾರವಾಗಿ ಯಾವುದೇ ವಿಚಾರವನ್ನೂ ಸ್ಪಷ್ಟಪಡಿಸಿರಲಿಲ್ಲ.


Share this with Friends

Related Post