Mon. Dec 23rd, 2024

ರಾಜಕೀಯದಿಂದ ದೂರ ಸರಿದ ಗೌತಮ್ ಗಂಭೀರ್

Gautam Gambhir
Share this with Friends

ದೆಹಲಿ : ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಪೂರ್ವ ದೆಹಲಿ ಸಂಸದರಾಗಿರುವ ಗೌತಮ್​ ಗಂಭೀರ್ ತಮ್ಮನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದು ಕೋರಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಗಂಭೀರ್, ‘ಕ್ರಿಕೆಟ್ ಸಂಬಂಧಿತ ಜವಾಬ್ದಾರಿಗಳತ್ತ ಗಮನ ಹರಿಸಬೇಕಾಗಿರುವುದರಿಂದ ನನ್ನನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಪಕ್ಷದ ಗೌರವಾನ್ವಿತ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಜನರ ಸೇವೆ ಮಾಡುವುದಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. ಜೈ ಹಿಂದ್’ ಎಂದು ಬರೆದುಕೊಂಡಿದ್ದಾರೆ.


Share this with Friends

Related Post