Fri. Nov 1st, 2024

ಎಸ್ ಎಸ್ ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಮಕ್ಕಳಿಗೆ ಸನ್ಮಾನ

Share this with Friends

ಮೈಸೂರು. ಮೇ.18: ಎಸ್ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪ್ 10 ಸ್ಥಾನ ಪಡೆದು ಸಾಧನೆಗೈದ ಮಕ್ಕಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಸನ್ಮಾನಿಸಿದರು

ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ವೇಳಡ ಮಾತನಾಡಿದ ರಾಜೇಂದ್ರ, ಎಸ್ ಎಸ್.ಎಲ್ .ಸಿ ಎಂಬುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ, ಈ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ತೆಗೆದು ಸಾಧನೆ ಮಾಡಿದ್ದೀರಿ, ಈ ಯಶಸ್ಸು ನಿಮ್ಮ ಮುಂದಿನ ಗುರಿ ತಲುಪಲು ಸೇತುವೆಯಾಗಿ ಇನ್ನಷ್ಟು ಸಾಧನೆಯ ಗರಿ ನಿಮ್ಮ ಮೂಡಿಗೇರಲಿ ಎಂದು ಹಾರೈಸಿದರು.

ಈ ಫಲಿತಾಂಶದಿಂದ ಮುಂದಿನ ದಿನಗಳಲ್ಲಿ ನಿಮ್ಮ ಮೇಲಿನ ನಿರೀಕ್ಷೆ ಹೆಚ್ಚಾಗಲಿದೆ, ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯಬೇಕು ಎಂದು ಕಿವಿ ಮಾತು ಹೇಳಿದರು.

ಅತ್ಯುತ್ತಮ ಅಂಕ ಬಂದ ಕೂಡಲೇ ಮುಂದಿನ ಭವಿಷ್ಯಕ್ಕೆ ಶ್ರಮ ಹಾಕುವುದನ್ನು ನಿಲ್ಲಿಸಬಾರದು, ದಿನದಿಂದ ದಿನಕ್ಕೆ ಶ್ರಮ ದುಪ್ಪಟ್ಟಾಗಬೇಕು. ಸತತ ಪ್ರಯತ್ನದಿಂದ ಫಲಿತಾಂಶ ದೊರಕುವಂತೆ, ನಿಮ್ಮ ಸಾಧನೆ ಪೋಷಕರಿಗೆ ಹೆಮ್ಮೆ ತರಬೇಕು ಎಂದು ಡಿಸಿ ತಿಳಿಹೇಳಿದರು

ಕೇವಲ ಓದಿಗಷ್ಟೇ ಸೀಮಿತವಾಗದೆ ಕ್ರೀಡೆ ಮತ್ತಿತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಇದರಿಂದ ಮಾನಸಿಕ, ದೈಹಿಕ ಪರಿಸ್ಥಿತಿ ಉತ್ತಮವಾಗುವುದರ ಜೊತೆಗೆ ಜೀವನದಲ್ಲಿ ದೊಡ್ಡ ಮಟ್ಟಕ್ಕೆ ತಲುಪಲು ಸಹಾಯ ಮಾಡುತ್ತದೆ.

ಬಾಬ ಸಾಹೇಬ್ ಅಂಬೇಡ್ಕರ್ ಅವರನ್ನು ಮಾದರಿಯನ್ನಾಗಿಸಿಕೊಂಡು ದೊಡ್ಡ ಮಟ್ಟದ ಯಶಸ್ಸನ್ನು ಸಾಧಿಸುವತ್ತ ನಿಮ್ಮ ಗುರಿ ಇರಲಿ, ವಿದ್ಯಾರ್ಥಿಗಳ ಜೀವನ ಎಂಬ ವಿಷಯಕ್ಕೆ ಬಂದರೆ ಪೋಷಕರ ಪಾತ್ರ ಬಹಳ ಮುಖ್ಯವಾಗಿದ್ದು ಅವರ ಹಾಗೂ ಹೋಗುಗಳನ್ನು ಸದಾ ಗಮನಿಸುತ್ತಿರಬೇಕು ಮಾರ್ಗ ಸೂಚಿಸಬೇಕು ಎಂದು ಡಾ.ಕೆ.ವಿ.ರಾಜೇಂದ್ರ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆಎಂ ಗಾಯತ್ರಿ ಅವರು ಮಾತನಾಡಿ,ಇಷ್ಟು ದಿನ ಇದ್ದಂತಹ ಶಾಲಾ ವಾತಾವರಣ ಮುಂದಿನ ದಿನಗಳಲ್ಲಿ ಬದಲಾಗುತ್ತದೆ. ವಿಭಿನ್ನ ರೀತಿಯ ವಾತಾವರಣಕ್ಕೆ ಹೊಂದಿಕೊಂಡು ಹೋಗಬೇಕಾದ ಸನ್ನಿವೇಶ ಬರುವುದರಿಂದ ಅದಕ್ಕೆ ಎಲ್ಲ ವಿದ್ಯಾರ್ಥಿಗಳು ಮಾನಸಿಕವಾಗಿ ಸಿದ್ದರಿರಬೇಕು ಎಂದು ಬುದ್ದಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಪಾಂಡು ಸೇರಿದಂತೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ 10 ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು.


Share this with Friends

Related Post