Wed. Dec 25th, 2024

ಬೆಂಗಳೂರಿಗೆ ಕುಡಿಯುವ ನೀರಿನ ಗ್ಯಾರೆಂಟಿ ನೀಡಿ:ಸರ್ಕಾರಕ್ಕೆ ಬಿಜೆಪಿ ಆಗ್ರಹ

Share this with Friends

ಬೆಂಗಳೂರು, ಫೆ.24: ತಮಿಳುನಾಡಿಗೆ
ಕಾವೇರಿ ನೀರನ್ನ ಬೇಕಾಬಿಟ್ಟಿ ಹರಿಸಿ
ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಹಣ ಸುರಿಯುವಂತೆ ಮಾಡಿದೆ ಸರ್ಕಾರ ಎಂದು ಬಿಜೆಪಿ ಕಿಡಿಕಾರಿದೆ.

ಇನ್ನೂ ಬೇಸಿಗೆ ಆರಂಭವಾಗಿಲ್ಲ, ಆದರೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ ಕೂಡಲೇ ಬೆಂಗಳೂರಿಗೆ ಕುಡಿಯುವ ನೀರಿನ ಗ್ಯಾರೆಂಟಿ ಕೊಡಿ ಎಂದು ಬಿಜಿಪಿ‌ ನಾಯಕರು ಒತ್ತಾಯಿಸಿದ್ದಾರೆ.

I.N.D.I ಮೈತ್ರಿಕೂಟದ ಡಿಎಂಕೆ ಪಕ್ಷದ ಜೊತೆ ದೋಸ್ತಿ ಉಳಿಸಿಕೊಳ್ಳಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದ ನಾಡದ್ರೋಹಿ ಸರ್ಕಾರ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂಪಾಯಿ ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ಪ್ರತಿಪಕ್ಷದ ನಾಯಕ‌ ಅಶೋಕ್ ಮತ್ತಿತರ ನಾಯಕರು ಕಿಡಿಕಾರಿದ್ದಾರೆ.

ಬೆಂಗಳೂರು ನಗರದಲ್ಲಿ ಕಾಡಬಹುದಾದ ನೀರಿನ ಸಮಸ್ಯೆ ಬಗ್ಗೆ ಮೊದಲೇ ಅಂದಾಜಿಸಿ ಹೆಚ್ಚುವರಿ ಕೊಳವೆ ಬಾವಿಗಳನ್ನು ಕೊರೆಸಲು, ಹಳೇ ಕೊಳವೆ ಬಾವಿಗಳ ಮರುಪೂರಣ ಮಾಡಲು, ನೀರಿಗಾಗಿ ಪರ್ಯಾಯ ವ್ಯವಸ್ಥೆ ಹುಡುಕಲು ಕ್ರಮ ಕೈಗೊಂಡಿದ್ದರೆ ಈಗ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಾಯಿಮಾತಿಗೆ ಘೋಷಣೆ ಮಾಡಿ ಆಡಳಿತದ ಚುಕ್ಕಾಣಿಯನ್ನು ಸಂಪೂರ್ಣವಾಗಿ ಅಧಿಕಾರಿಗಳಿಗೆ ಕೊಟ್ಟು ಕಾಂಗ್ರೆಸ್ ನಾಯಕರು ಸದಾ ತಮ್ಮ ಕುರ್ಚಿ ಉಳಿಸಿಕೊಳ್ಳಲು, ಪಕ್ಕದ ರಾಜ್ಯಗಳ ಚುನಾವಣೆ ಉಸಾಬರಿ ನೋಡಿಕೊಳ್ಳಲು ಕಾಲಹರಣ ಮಾಡುತ್ತಾ ಬೆಂಗಳೂರನ್ನ ಸಂಪೂರ್ಣವಾಗಿ ನಿರ್ಲಕ್ಷ ಮಾಡಿದ್ದರಿಂದ ಬೆಂಗಳೂರಿನ ಜನರು ಹನಿ ನೀರಿಗೂ ಪರದಾಡುವ ದುಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ‌ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿಸಿಎಂ ಡಿ.ಕೆ‌‌.ಶಿವಕುಮಾರ್ ಅವರು ಈಗಲಾದರೂ ಎಚ್ಚೆತ್ತುಕೊಂಡು ಅಧಿಕಾರಿಗಳ ಸಭೆ ಕರೆದು ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು, ಬೆಂಗಳೂರಿನ ಜನತೆಗೆ ಕನಿಷ್ಠ ಪಕ್ಷ ಕುಡಿಯುವ ನೀರಿನ ಗ್ಯಾರೆಂಟಿ ಆದರೂ ಕೊಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.


Share this with Friends

Related Post