ಬೆಂಗಳೂರು, ಸೆ.3 : ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬಾರದೇ ಚಿಂತಿತರಾಗಿದ್ದ ಮಹಿಳೆಯರಿಗೆ ಇದೀಗ ಗ್ಯಾರಂಟಿ ಗುಡ್ ನ್ಯೂಸ್ ಸಿಕ್ಕಿದ್ದು, ಜುಲೈ ಹಾಗೂ ಅಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಇಲ್ಲಿಯವರೆಗೂ 11 ತಿಂಗಳ ಹಣವನ್ನು ಖಾತೆಗೆ ಜಮಾ ಮಾಡಿದ್ದೇವೆ. ಇನ್ನುಳಿದ ಎರಡು ತಿಂಗಳ ಹಣ ಶೀಘ್ರವೇ ಹಾಕುವುದಾಗಿ ಹೇಳಿದರು.
ವಿಳಂಬಕ್ಕೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ. ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು.