Fri. Nov 1st, 2024

ಗುಜರಾತ್​ ಭೀಕರ ಅಗ್ನಿ ದುರಂತ:ಎಚ್ಚೆತ್ತ‌ ರಾಜ್ಯ ಸರ್ಕಾರ

Share this with Friends

ಬೆಂಗಳೂರು,ಮೇ.27: ಗುಜರಾತ್​ನಲ್ಲಿ ಶನಿವಾರಸಂಭವಿಸಿದ ಭೀಕರ ಅಗ್ನಿ ದುರಂತದಿಂದ ರಾಜ್ಯ ಸರ್ಕಾರ
ಎಚ್ಚೆತ್ತುಕೊಂಡಿದೆ.

ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ‌ಸೂಚನೆ ನೀಡಿದೆ.

ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್‌ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳು ಇರುವ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮುನ್ನೆಚ್ಚರಿಕೆಗಳ ಅನುಸರಣೆ ಅತ್ಯಂತ ಮಹತ್ವದ್ದಾಗಿದೆ. ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸುವಂತೆ ಸೂಚನೆ ನೀಡಿದ್ದಾರೆ.

ಗುಜರಾತ್‌ನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆ.

ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು,
ಮಜನರಂಜನಾ ಕೇಂದ್ರ, ಗೇಮಿಂಗ್ ರೋಝನ್​​ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು

ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿರ್ಬಂಧ ಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.


Share this with Friends

Related Post