Mon. Dec 23rd, 2024

ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ:ಯೋಧ ಹುತಾತ್ಮ

Share this with Friends

ಶ್ರೀನಗರ,ಜು.24: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಒಬ್ಬ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಬಳಿ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದಾಗ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಕುಪ್ವಾರದ ಕೋವುಟ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದರಿಂದ ಸೇನೆಯು ಜಮ್ಮು-ಕಾಶ್ಮೀರದ ಪೊಲೀಸರೊಂದಿಗೆ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

ಈ ಕಾರ್ಯಾಚರಣೆ ವೇಳೆ ಉಗ್ರರು ಕೂಡಾ ಗುಂಡಿನ ಚಕಮಕಿ ನಡೆಸಿದ್ದಾರೆ,ಈ ವೇಳೆ ಒಬ್ಬ ಸೈನಿಕ ಹುತಾತ್ಮರಾದರೆ ಮತ್ತೊಬ್ಬರು ಗಾಯಗೊಂಡರು,ಆದರೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ತಿಳಿಸಿದೆ.

ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಲ್ಯಾನ್ಸ್‌ ನಾಯಕ್‌ ಸುಭಾಷ್‌ ಕುಮಾರ್‌ ಅವರ ದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಸೇನೆಗೆ ಹಸ್ತಾಂತರಿಸಲಾಗಿದೆ.


Share this with Friends

Related Post