Mon. Dec 23rd, 2024

ಉಪ ರಾಷ್ಟ್ರಪತಿಗಳನ್ನು‌ ಭೇಟಿ ಮಾಡಿದ ಹೆಚ್.ಡಿ.ದೇವೇಗೌಡರ ಕುಟುಂಬ

Share this with Friends

ನವದೆಹಲಿ,ಜು.3:ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮ್ಮ ಪುತ್ರ ಹಾಗ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು‌

ಧನಕರ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ದೇವೇಗೌಡರ ಕುಟುಂಬವರ್ಗ ಭಾಗಿಯಾದರು.

ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪ್ರೀತಿಯಿಂದ ಬರಮಾಡಿಕೊಂಡಿದ್ದಕ್ಕೆ ನಾನು ಆಭಾರಿ ಆಗಿದ್ದೇನೆ ಎಂದು ದೇವೇಗೌಡರ ಮೊಮ್ಮಗ ,ಹೆಚ್ ಡಿ ಕೆ ಪತ್ರ ನಿಖಿಲ್ ಕುಮಾರಸ್ವಾಮಿ ಹೃದಯ ತುಂಬಿ ಹೇಳಿದ್ದಾರೆ.

ಉಪ ರಾಷ್ಟ್ರಪತಿ ಗಳ ಭೇಟಿ ವೇಳೆ ಹೆಚ್ ಡಿ ಕೆ ಪತ್ನಿ ಅನಿತಾ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ‌ದಂಪತಿ,ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಮತ್ತು‌ ಪುತ್ರ ಕೂಡಾ ಉಪಸ್ಥಿತರಿದ್ದರು.


Share this with Friends

Related Post