Thu. Mar 5th, 2026

ಜೆಡಿಎಸ್ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ನೇಮಕ

Share this with Friends

ಬೆಂಗಳೂರು: ರಾಜ್ಯದ ಪ್ರಮುಖ ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳದಲ್ಲಿ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಕೋರ್ ಕಮಿಟಿ‌ ಸೇರಿ ವಿವಿಧ ಸಮಿತಿಗಳ ನೇಮಕ ಪ್ರಕ್ರಿಯೇ ಪೂರ್ಣಗೊಳಿಸಲಾಗಿದೆ.

ಇಂದು ಜೆಡಿಎಸ್ ಪಡಸಾಲೆಯಲ್ಲಿ ಬಿರುಸಿನ ರಾಜಕೀಯ ವಿದ್ಯಮಾನಗಳು ಜರುಗಿದ್ದು,ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಂಚಾಲಕರನ್ನಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಿ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ:

ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಿದ್ದು, ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಅರಕಲಗೂಡು ಶಾಸಕ ಎ. ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.ಮಾಜಿ ಶಾಸಕ ರಾಜವೆಂಕಟಪ್ಳ ನಾಯಕ ದೊರೆ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಸಂಸದ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಆಲ್ಕೋಡ ಹನುಮಂತಪ್ಪ, ಹೆಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಕೆ.ಎಂ. ತಿಮ್ಮರಾಯಪ್ಪ, ಎ. ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆ.ಜಿ. ಪ್ರಸನ್ನಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿ.ವಿ. ಚಂದ್ರಶೇಖರ್ ಅವರನ್ನು ಕೋರ್ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಪ್ರಚಾರ ಸಮಿತಿಗೆ ವೈ ಎಸ್ ವಿ ದತ್ತ ನಾಯಕತ್ವ:

ಜೆಡಿಎಸ್ ಪ್ರಚಾರ ಸಮಿತಿಯನ್ನು ರಾಜ್ಯಾಧ್ಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಹಾಗು ದೇವೇಗೌಡರ ಪರಮಾಪ್ತ ವೈ ಎಸ್ ವಿ ದತ್ತ ಅವರನ್ನು ನೇಮಕ ಮಾಡಿದ್ದಾರೆ.

ಸದಸ್ಯರಾಗಿ ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಸುರೇಶ್ ಗೌಡ, ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಮಾಜಿ ಶಾಸಕರಾದ ಡಾ. ಕೆ. ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಶಾಸಕರಾದ ಭೀಮನಗೌಡ (ರಾಜುಗೌಡ) ಪಾಟೀಲ್, ಜಿ.ಡಿ. ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ಎಂ.ಆರ್. ಮಂಜುನಾಥ್, ಕೆ. ವಿವೇಕಾನಂದ, ಸಿ.ಎನ್. ಮಂಜೇಗೌಡ, ಡಾ. ಸೂರಜ್ ರೇವಣ್ಣ, ಹಿರಿಯ ನಾಯಕ ಸುಧಾಕರ್ ಎಸ್.ಶೆಟ್ಟಿ ಅವರು ಸದಸ್ಯರಾಗಿದ್ದಾರೆ.

ಡಿ. ನಾಗರಾಜಯ್ಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ:

ಮಾಜಿ ಸಚಿವರಾದ ಡಿ. ನಾಗರಾಜಯ್ಯ ಅವರನ್ನು ಜೆಡಿಎಸ್ ಶಿಸ್ತುಪಾಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಮಾಜಿ ಸಂಸದ ಕುಪೇಂದ್ರರೆಡ್ಡಿ, ಶಾಸಕ ಜಿ.ಕೆ. ವೆಂಕಟಾಶಿವಾರೆಡ್ಡಿ, ಮಾಜಿ ಶಾಸಕರಾದ  ಕೆ.ಎಸ್.ಲಿಂಗೇಶ್, ಕೆ. ಮಹದೇವ, ಆರ್. ಚೌಡರೆಡ್ಡಿ, ಪಿ.ಆರ್ ಸುಧಾಕರ್ ಲಾಲ್, ಎಲ್.ಎನ್. ನಿಸರ್ಗ ನಾರಾಯಣಸ್ವಾಮಿ, ಡಾ. ಕೆ. ಶ್ರೀನಿವಾಸಮೂರ್ತಿ, ಶಾಸಕ ಹೆಚ್. ಟಿ. ಮಂಜುನಾಥ್ ಸದಸ್ಯರಾಗಿದ್ದಾರೆ.

ಗ್ರೇಟರ್ ಬೆಂಗಳೂರು ಪಾಲಿಕೆಗಳಿಗೆ ಉಸ್ತುವಾರಿಗಳ ನೇಮಕ:

ಹೊಸದಾಗಿ ರಚನೆ ಆಗಿರುವ ಗ್ರೇಟರ್ ಬೆಂಗಳೂರು ಐದು ಪಾಲಿಕೆಗಳ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.ಬೆಂಗಳೂರು ನಗರದ ಕೇಂದ್ರ, ಪಶ್ಚಿಮ,ದಕ್ಷಿಣ, ಪೂರ್ವ, ಉತ್ತರ ಪಾಲಿಕೆಗಳಿಗೆ ಜೆಡಿಎಸ್ ಉಸ್ತುವಾರಿ ಸಮಿತಿ ಅಧ್ಯಕ್ಷರನ್ನಾಗಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ನೇಮಕ ಮಾಡಲಾಗಿದೆ./ಸದಸ್ಯರನ್ನಾಗಿ ಶಾಸಕರಾದ ಎಂ.ಟಿ. ಕೃಷ್ಣಪ್ಪ, ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಸಿ.ಎನ್. ಮಂಜೇಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ನೂತನ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಮಾಜಿ ಶಾಸಕರಾದ ಸುರೇಶ್‌ ಗೌಡ, ಎ. ಮಂಜುನಾಥ್, ಹೆಚ್.ಎಂ. ರಮೇಶ್‌ ಗೌಡ, ಕೆ.ಎ. ತಿಪ್ಪೇಸ್ವಾಮಿ, ಎಲ್.ಎನ್. ನಾರಾಯಣಸ್ವಾಮಿ, ಹಿರಿಯ ನಾಯಕ ಜಗದೀಶ್ ನಾಗರಾಜಯ್ಯ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಹಿರಿಯ ನಾಯಕ ಆರ್. ಪ್ರಕಾಶ್ ಅವರುಗಳು ಸದಸ್ಯರಾಗಿರುತ್ತಾರೆ.


Share this with Friends

Related Post