ಬೆಂಗಳೂರು, ಮೇ.13: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಹೆಚ್.ಡಿ.ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
5 ಲಕ್ಷ ರೂಪಾಯಿ ಬಾಂಡ್, ಇಬ್ಬರು ಶ್ಯುರಿಟಿ,ಕೋರ್ಟ್ ಸಮ್ಮತಿ ಇಲ್ಲದೇ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ, ಸಾಕ್ಷ್ಯಾಧಾರಗಳನ್ನು ನಾಶ ಮಾಡಬಾರದು ಮತ್ತು ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ವಿಧಿಸಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
ಕಳೆದ ಐದು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಹೆಚ್.ಡಿ.ರೇವಣ್ಣಗೆ ರಿಲೀಫ್ ಸಿಕ್ಕಿದಂತಾಗಿದೆ,ಆದರೆ ಅವರಿಗೆ ಬಿಡುಗಡೆಯ ಭಾಗ್ಯ ಸಿಗುವುದು ನಾಳೆ ಸಂಜೆಗೇನೆ.
ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು,ನಂತರ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.