Mon. Dec 23rd, 2024

ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಇಂದು ಚಾಲನೆ

Hampu Utsava 2024
Share this with Friends

ಹೊಸಪೇಟೆ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ದಿನಗಳ ಹಂಪಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫೆಬ್ರವರಿ 2, 3 ಮತ್ತು 4ರಂದು ಹಂಪಿ ಉತ್ಸವ ನಡೆಯಲಿದೆ.

ಶುಕ್ರವಾರ ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 2, 3 ಮತ್ತು 4ರಂದು ಗ್ರಾಮೀಣ ಆಟಗಳು, ರಂಗೋಲಿ ಸ್ಪರ್ಧೆಗಳು, ಸಂಗೀತ, ಸಾಹಸ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಹಿಂದೆ ಪ್ರತಿ ವರ್ಷ ನವೆಂಬರ್ 3, 4 ಮತ್ತು 5ರಂದು ಹಂಪಿ ಉತ್ಸವ ನಡೆಯುತ್ತಿತ್ತು. ಸರ್ಕಾರ ಬದಲಾದಂತೆ ದಿನಾಂಕಗಳನ್ನು ಸಹ ಬದಲಾಯಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಡವಾಗಿ ಹಂಪಿ ಉತ್ಸವ ಆಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರಳವಾಗಿ ಉತ್ಸವ ನಡೆಸಲು ಸರ್ಕಾರ ಯೋಚಿಸಿದೆ. ವಿಜಯನಗರ ಜಿಲ್ಲಾಡಳಿತವು ಹಂಪಿ ಉತ್ಸವಕ್ಕೆ 17 ಕೋಟಿ ರೂಪಾಯಿಗಳ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದಿಂದ 14 ಕೋಟಿ ರೂಪಾಯಿ ನೀಡಲಾಗಿದೆ. ಇನ್ನು ಉಳಿದ ಹಣವನ್ನು ಸ್ಥಳೀಯವಾಗಿ ಹೊಂದಿಸಲಾಗಿದೆ.

ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ

ಹಂಪಿ ಉತ್ಸವದ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಕನ್ನಡಿಗರಿಗೆ ಕರೆ ನೀಡಿದ್ದಾರೆ. “ನಾಡಿನ ಕಲೆ, ವಾಸ್ತುಶಿಲ್ಪದ ತೊಟ್ಟಿಲು, ವಿಶ್ವವಿಖ್ಯಾತ ಹಂಪಿಯಲ್ಲಿ ಇದೇ ಫೆಬ್ರವರಿ 2ರಿಂದ 4ನೇ ತಾರೀಕಿನ ವರೆಗೆ ಹಂಪಿ ಉತ್ಸವ ನಡೆಯಲಿದೆ. ತಾವೆಲ್ಲರೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿ” ಎಂದು ಮನವಿ ಮಾಡಿದ್ದಾರೆ.


Share this with Friends

Related Post