Tue. Dec 24th, 2024

ಹೆಚ್.ಡಿ.ಕೆ.,ಡಾ. ಸಿ. ಎನ್, ಮಂಜುನಾಥ್ ನಾಮಪತ್ರ ಸಲ್ಲಿಕೆ

Share this with Friends

ಬೆಂಗಳೂರು,ಏ.4: ಮೊದಲ ಹಂತದ ಲೋಕಸಭಾ ಚುನಾವಣೆಯ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಹೆಚ್ ಡಿ ಕೆ ಸೇರಿದಂತೆ ಅನೇಕರು ನಾಮಪತ್ರ ಸಲ್ಲಿಸಿದರು.

ಜೆ ಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್, ಮಂಜುನಾಥ್ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.

ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಯದುವೀರ್ ಒಡೆಯರ್ ಮತ್ತಿತರರು ಹಾಜರಿದ್ದರು.

ಇದಕ್ಕೂ ಮುನ್ನ ಮಂಡ್ಯ ಕಾವೇರಿ ಭವನದ ಮುಂಭಾಗದಲ್ಲಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಜಯಚಾಮರಾಜೇಂದ್ರ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರುಗಳ ಪುತ್ಥಳಿಗೆ ಗೌರವ ಸಲ್ಲಿಸಿದರು.


Share this with Friends

Related Post