Mon. Dec 23rd, 2024

ಎರಡು ದಿನ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

Share this with Friends

ಬೆಂಗಳೂರು, ಜು.26: ರಾಜ್ಯಾದ್ಯಂತ ಅದರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಏಳು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹಾಸನ, ಕೊಡಗು,ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯಲ್ಲೂ ಹೆಚ್ಚು ಮಳೆಯಾಗಲಿದ್ದು,ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ರಾಮನಗರ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಗಾಗ್ಗೆ ‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Share this with Friends

Related Post