ಮಂಡ್ಯ,ಜು.19: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ ಆರ್ ಎಸ್ ಗೆ ಹೆಚ್ಚು ನೀರು ಬರುತ್ತಿದ್ದು ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಕೃಷ್ಣರಾಜಸಾಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 10,000 ರಿಂದ 25,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಹಾಗೂ ಈ ಪ್ರಮಾಣವು ಇನ್ನೂ ಹೆಚ್ಚಾಗುವ ಸಂಭವವಿದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚು ನೀರು ಹರಿದು ಬರುವುದರಿಂದ ಪ್ರವಾಹ ಸಂಭವಿಸುವ ಸಾಧ್ಯತೆ ಇದ್ದು ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಅಗತ್ಯ ಕ್ರಮ ವಹಿಸಬೇಕು ಮತ್ತು ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಬೇಕು ಎಂದು ಸಲಹೆ ನೀಡಿದ್ದಾರೆ.