Mon. Dec 23rd, 2024

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅನುಮತಿ

Board-Exam
Share this with Friends

ಬೆಂಗಳೂರು.ಮಾ.22 : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. 5,8, 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಮತ್ತು 11ನೇ ತರಗತಿಯ ಪರೀಕ್ಷಾ ಮೌಲ್ಯಮಾಪನ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.

ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದು ಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಕೆ.ರಾಜೇಶ್ ರೈ ಅವರು ರದ್ದು ಪಡಿಸಿದ್ದಾರೆ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆ ನಡೆಸಬಹುದು ಎಂದ ನ್ಯಾಯ ಪೀಠ ಸೂಚಿಸಿದೆ.

ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

ಅದರಂತೆ, ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಟ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ.

5,8,9 ತರಗತಿಗಳಿಗೆ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ 1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್ 22 ಮತ್ತು 145 ರ ಅಡಿಯಲ್ಲಿ ನಿಯಮಾವಳಿಗಳನ್ನು ರೂಪಿಸದೆ, ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಏಕ ಸದಸ್ಯ ಪೀಠದ ನ್ಯಾಯಾಧೀಶರು ಅಭಿಪ್ರಾಯಪಟ್ಟಿ, ಇದು ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರವು ನಿಯಮಗಳನ್ನು ರೂಪಿಸಬೇಕು ಎಂದು ಆದೇಶಿಸಿದೆ. ಅಂತಹ ನಿಯಮಗಳನ್ನು ಅಂತಿಮಗೊಳಿಸುವ ಮೊದಲು ಮಧ್ಯಸ್ಥಗಾರರಿಂದ ಚರ್ಚಿಸಬೇಕು ಎಂದು ಆದೇಶಿಸಿತ್ತು.

ಆದರೆ, ಈಗ ಪೀಠವು ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಗಳನ್ನು ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಾಯಿದೆ, 2009 ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವ ಮೂಲಕ ಮಾರ್ಗಸೂಚಿಗಳಾಗಿ ಮಾತ್ರ ಅರ್ಥೈಸಿಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟಿದೆ.


Share this with Friends

Related Post