Thu. Dec 26th, 2024

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ : 7 ಮಂದಿ ದುರ್ಮರಣ

Share this with Friends

ಉತ್ತರ ಕನ್ನಡ, ಜು.16: ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ

ಈ‌ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ,
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಘಟನೆಯಲ್ಲಿ 9 ಜನ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಗುಡ್ಡ ಕುಸಿತದಲ್ಲಿ 7 ಜನ ಸಾವನ್ನಪ್ಪಿದ್ದಾರೆ,ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದರು.

ಸ್ಥಳದಲ್ಲಿ ಮಣ್ಣುತೆರವು ಕಾರ್ಯಾಚರಣೆ ಚುರುಕುಗೊಂಡಿದೆ. ಹೆದ್ದಾರಿ ಮೇಲೆ ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದೆ ಎಂದು ಹೇಳಿದರು.


Share this with Friends

Related Post