Sat. Jun 6th, 2026

ನಾನು ಆರೋಗ್ಯವಾಗಿದ್ದೇನೆ, ವದಂತಿ ನಂಬಬೇಡಿ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

Share this with Friends

ಬೆಂಗಳೂರು: ತಮ್ಮ ಆರೋಗ್ಯದ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ತೆರೆ ಎಳೆದಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು, ತಾವು ಸಂಪೂರ್ಣ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.

ಘಟನೆಯ ವಿವರ:

ಕಳೆದ ನಾಲ್ಕು ದಿನಗಳ ಹಿಂದೆ ತಮ್ಮ ಕನಕಗಿರಿ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮುಗಿಸಿ, ಭಾನುವಾರ ರಾತ್ರಿ ಕೊಪ್ಪಳದಿಂದ ಬೆಂಗಳೂರಿಗೆ ಮರಳುತ್ತಿದ್ದೆ. ಈ ಸಂದರ್ಭದಲ್ಲಿ ಮಾರ್ಗಮಧ್ಯೆ ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಕುಟುಂಬ ವೈದ್ಯರ ಸಲಹೆಯ ಮೇರೆಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದೆ ಎಂದು ತಿಳಿಸಿದ್ದಾರೆ.

ಗ್ಯಾಸ್ಟ್ರಿಕ್ ಸಮಸ್ಯೆ:

ಆಸ್ಪತ್ರೆಯಲ್ಲಿ ಇಸಿಜಿ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ವರದಿಗಳು ಸಾಮಾನ್ಯವಾಗಿದೆ. “ಕೇವಲ ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಎದೆನೋವು ಕಾಣಿಸಿಕೊಂಡಿತ್ತು, ಆತಂಕಪಡುವ ಅಗತ್ಯವಿಲ್ಲ” ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಅಧಿವೇಶನಕ್ಕೆ ಹಾಜರಿ:

ಯಾವುದೇ ಅನಗತ್ಯ ವದಂತಿಗಳನ್ನು ಹಬ್ಬಿಸಬಾರದು ಎಂದು ಮನವಿ ಮಾಡಿರುವ ಅವರು, ಸೋಮವಾರ ಬೆಳಿಗ್ಗೆಯಿಂದಲೇ ಎಂದಿನಂತೆ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Share this with Friends

Related Post