Fri. Nov 1st, 2024

ಸಿದ್ದು ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ:ವಿಜಯೇಂದ್ರ‌ ಟಾಂಗ್

Share this with Friends

ಬೆಂಗಳೂರು, ಜೂ.28: ಕಾಂಗ್ರೆಸ್‌ನಲ್ಲಿ ಡಿಸಿಎಂ ಹುದ್ದೆ ಸೃಷ್ಟಿ, ಸಿಎಂ ಕುರ್ಚಿ ಗದ್ದಲ ಜೋರಾಗಿದ್ದು, ಸಿದ್ದರಾಮಯ್ಯ ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಬಲಿ ಹಾಕಬೇಕೆಂದು ಡಿಸಿಎಂ ಹುದ್ದೆ ಮುನ್ನೆಲೆಗೆ ತಂದಿದ್ದಾರೆ,ಅದು ಈಗ ಸಿದ್ದರಾಮಯ್ಯ ಬುಡಕ್ಕೆ ಬಂದಿದೆ,ಅವರು ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

ಸಿಎಂ, ಡಿಸಿಎಂ, ಸಚಿವರ ಗದ್ದಲ ಹೆಚ್ಚಾಗಿದೆ. ಸಿಎಂ, ಡಿಸಿಎಂ,ಸಚಿವರು ಹಾದಿ-ಬೀದಿಯಲ್ಲಿ ಹೊಡೆದಾಡುಕೊಳ್ಳುತ್ತಿದ್ದಾರೆ, ಜನ ಈ ಸರ್ಕಾರದ ವಿರುದ್ಧ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ‌ ಎಂದು ‌ವಿಜಯೇಂದ್ರ ಟೀಕಿಸಿದರು.

ಬಿಜೆಪಿ ಹೋರಾಟದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಇದೇ ವೇಳೆ ತಿಳಿಸಿದರು.

ಲೋಕಸಭಾ ಚುನಾವಣೆಗೂ ಮುಂಚೆ ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್ ಒಟ್ಟಿಗೆ ಕಾಣಿಸೋದು ಏನು, ಇಬ್ಬರು ಪರಸ್ಪರ ತಿಂಡಿ ತಿನ್ನಿಸೋದು ಏನು, ಹೆಗಲ ಮೇಲೆ ಕೈ ಹಾಕುವುದು ಏನು,ಈಗ ಒಬ್ಬರಿಗೊಬ್ಬರು ಬುಡ ಕುಯ್ದುಕೊಳ್ಳುವ ಕೆಲಸ ಮಾಡಿಕೊಳ್ಳುತ್ತಿದ್ದಾರೆ,ಇವರಿಗೆ ರಾಜ್ಯದ ಜನರ ಸಮಸ್ಯೆ ಬೇಕಿಲ್ಲ, ಅಭಿವೃದ್ಧಿ ಬಗ್ಗೆ ಆಸಕ್ತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಬೆಲೆ ಏರಿಕೆ ಬಗ್ಗೆ, ಅಭಿವೃದ್ಧಿ ಬಗ್ಗೆ ಕೇಳಿದರೆ ಮುಖ್ಯಮಂತ್ರಿಗಳು ಉಡಾಫೆ ಉತ್ತರ ಕೊಡುತ್ತಿದ್ದಾರೆ. ಈ ಸರ್ಕಾರದ ವಿರುದ್ಧ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ನಮ್ಮ ಮುಂದೆ ಇರುವುದು ಹೋರಾಟದ ದಿನಗಳು ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ನಮಗೆ ಮುಖ್ಯ ಅಲ್ಲ,‌ಆ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲುತ್ತೇವೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.


Share this with Friends

Related Post