Mon. Dec 23rd, 2024

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ‌‌‌‌ ಮಾರಕ: ಸಿಎಂ ಎಚ್ಚರಿಕೆ

Share this with Friends

ಬೆಂಗಳೂರು, ಫೆ.25: ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಎಚ್ಚರಿಸಿದರು.

ಅರಮನೆ ಮೈದಾನದಲ್ಲಿಂದು ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭವನ್ನು ಅವರು ಮಾತನಾಡಿದರು.

ಸಂಸದ ಅನಂತಕುಮಾರ ಹೆಗ್ಡೆ,ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಘೋಷಿಸಿದ್ದರು,ಆದರೆ ಪ್ರಧಾನಿ ಮೋದಿಯವರಾಗಲೀ, ಅಮಿತ್ ಶಾ ಆಗಲೀ, ಬಿಜೆಪಿಯಾಗಲೀ,ಆರ್ ಎಸ್ ಎಸ್ ಆಗಲಿ ಖಂಡಿಸಲಿಲ್ಲ, ವಿರೋಧಿಸಲಿಲ್ಲ,ಹಾಗಾಗಿ ಬಿಜೆಪಿ ಮತ್ತು ಆರ್ ಎಸ್ ಎಸ್ ನ ಅಜೆಂಡಾವನ್ನು, ಉದ್ದೇಶವನ್ನು ಅನಂತಕುಮಾರ ಹೆಗ್ಡೆ ಬಾಯಲ್ಲಿ ಹೇಳಿಸಿದರು. ಈ ಬಗ್ಗೆ ಇಡಿ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಸಿಎಂ ತಿಳಿಸಿದರು.

ಈ ದೇಶದ, ನಮ್ಮ ನಾಡಿನ ದುಡಿಯುವವರ ಹಕ್ಕುಗಳು, ಶ್ರಮಿಕರು, ರೈತರು, ಕಾರ್ಮಿಕರು ಮತ್ತು ಮಹಿಳಾ ಸಮುದಾಯದ ಅಸ್ತಿತ್ವ ಅಡಗಿರುವುದೇ ನಮ್ಮ ಸಂವಿಧಾನದಲ್ಲಿ. ಸಂವಿಧಾನ ಬದಲಾವಣೆಯಿಂದ ಈ ಎಲ್ಲಾ ಸಮುದಾಯಗಳು ಮರಳಿ ಗುಲಾಮಗಿರಿಗೆ ದೂಡಲ್ಪಡುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಇಡಿ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ.
ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ,ಐ ಎನ್ ಡಿ ಐ ಎ ಒಕ್ಕೂಟದ ಮುಖಂಡರಾದ ಫಾರೂಕ್ ಅಬ್ದುಲ್ಲಾ, ಸೀತಾರಾಮ್ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಹಾಜರಿದ್ದರು.


Share this with Friends

Related Post