Tue. Dec 24th, 2024

ಸಿಎಎ ಜಾರಿ: ಬಿಜೆಪಿಯ‌ ಚುನಾವಣಾ ಗಿಮಿಕ್- ಸಿದ್ದರಾಮಯ್ಯ‌ ಟೀಕೆ

Share this with Friends

ಉಡುಪಿ, ಮಾ.13: ಪೌರತ್ವ ಕಾಯ್ದೆಯನ್ನು ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರ್ಕಾರ‌ ಜಾರಿ ಮಾಡಿದೆ ಎಂದು ಮುಖ್ಯ‌ ಮಂತ್ರಿ
ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಮಾಡಿದ್ದಾರೆ ಎಂದು ಹೇಳಿದರು.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದು ಪ್ರಶ್ನೆಯೊಂದಕ್ಕೆ‌ ಸಿಎಂ ಉತ್ತರಿಸಿದರು.


Share this with Friends

Related Post